`ಕಥೆ, ಚಿತ್ರಕಥೆ, ನಿರ್ದೇಶನ ಪುಟ್ಟಣ್ಣ` ಚಿತ್ರ ಸದ್ಯದಲ್ಲೇ ತೆರೆಗೆ
Posted date: 26 Thu, Nov 2015 – 10:10:49 AM

ಆಪಲ್ ಬ್ಲಾಸಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಹೆಚ್.ಡಿ.ನಾರಾಯಣಬಾಬು ಅವರು ನಿರ್ಮಿಸಿರುವ ‘ಕಥೆ, ಚಿತ್ರಕಥೆ, ನಿರ್ದೇಶನ ಪುಟ್ಟಣ್ಣ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ಶ್ಯಾಮ್‌ಪ್ರಸಾದ್ ಛಾಯಾಗ್ರಹಣ, ರವಿ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ತ್ರಿಭುವನ್ ನೃತ್ಯ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಕೋಮಲ್, ಪ್ರಿಯಾಮಣಿ, ಪೂಜಾಗಂಧಿ, ದೊಡ್ಡಣ್ಣ, ಸಾಧುಕೋಕಿಲ, ರವಿಶಂಕರ್, ಬುಲ್ಲೆಟ್ ಪ್ರಕಾಶ್, ಕುರಿ ಪ್ರತಾಪ್ ಮುಂತಾದವರಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed