`ಟೈಸನ್` ಚಿತ್ರಕ್ಕೆ ಹಾಡುಗಳ ಚಿತ್ರೀಕರಣ
Posted date: 07 Tue, Jul 2015 – 09:45:06 AM

ದ್ರುವಿನ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಬಾಬುರೆಡ್ಡಿ ಅವರು ನಿರ್ಮಿಸುತ್ತಿರುವ ‘ಟೈಸನ್ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ೪೫ ದಿನಗಳ ಕಾಲ ಒಂದೇ ಹಂತದ ಚಿತ್ರೀಕರಣ ನಡೆದಿದೆ. ಇದೇ ತಿಂಗಳ ಹದಿನೈದರಿಂದ ಮೂರು ಹಾಡುಗಳ ಚಿತ್ರೀಕರಣ ಆರಂಭವಾಗಲಿದೆ. ಆ ಪೈಕಿ ಎರಡು ಹಾಡುಗಳ ಚಿತ್ರೀಕರಣ ವಿದೇಶದಲ್ಲಿ ನಡೆಯಲಿದೆ.
ರಾಮ್‌ನಾರಾಯಣ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಜೆಸ್ಸಿಗಿಫ಼್ಟ್, ಗಣೇಶ್ ಹಾಗೂ ಹರಿಕೃಷ್ಣ ಅವರ ಸಂಗೀತ ನಿರ್ದೇಶನವಿದೆ. ಕೆ.ಎಂ.ವಿಷ್ಣುವರ್ಧನ್ ಛಾಯಾಗ್ರಹಣ, ವೆಂಕಟೇಶ್ ಸಂಕಲನ, ಹರ್ಷ, ಮುರುಳಿ, ರಾಮು ನೃತ್ಯ ನಿರ್ದೇಶನ ಹಾಗೂ ಶ್ರೀನಿವಾಸ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು ಸತೀಶ್‌ಚಂದ್ರ ಶೆಟ್ಟಿ.
ವಿನೋದ್‌ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಗಾಯಿತ್ರಿ ಅಯ್ಯರ್. ರವಿಕಾಳೆ, ಸುಮನ್, ಶ್ರೀನಿವಾಸಮೂರ್ತಿ, ವಿನಯಪ್ರಸಾದ್, ಚಿಕ್ಕಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed