`ನೀರ್‌ದೋಸೆ` ಚಿತ್ರಕ್ಕೆ ರೀರೆಕಾರ್ಡಿಂಗ್
Posted date: 19 Thu, May 2016 – 11:53:37 AM

ಸ್ಕಂದ ಎಂಟರ್‌ಟೈನ್‌ಮೆಂಟ್ ಲಾಂಛನದಲ್ಲಿ ಪ್ರಸನ್ನ ಮತ್ತು ಶಶಿಕಲಾಬಾಲಾಜಿ ಅವರು ನಿರ್ಮಿಸುತ್ತಿರುವ ‘ನೀರ್‌ದೋಸೆ  ಚಿತ್ರಕ್ಕೆ ಅನೂಪ್ ಸೀಳಿನ್ ಸ್ಟುಡಿಯೋದಲ್ಲಿ ರೀರೆಕಾರ್ಡಿಂಗ್ ನಡೆಯುತ್ತಿದೆ. ಅನೂಪ್ ಸೀಳಿನ್ ಸಂಗೀತ ನೀಡಿರುವ ಚಿತ್ರದ ಹಾಡುಗಳ ಸೀಡಿ ಸದ್ಯದಲ್ಲೇ ಬಿಡುಗಡೆಯಾಗಲಿದೆ.
    ವಿಜಯ್‌ಪ್ರಸಾದ್ ರಚನೆ ಹಾಗೂ ನಿರ್ದೇಶನದ ಈ ಚಿತ್ರದ ನಾಯಕರಾಗಿ ನವರಸ ನಾಯಕ ಜಗ್ಗೇಶ್ ಅಭಿನಯಿಸಿದ್ದಾರೆ. ಹರಿಪ್ರಿಯ, ದತ್ತಣ್ಣ, ಸುಮನ್ ರಂಗನಾಥ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
    ಸುಜ಼್ಞಾನ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸುರೇಶ್ ಅರಸ್ ಅವರ ಸಂಕಲನವಿದೆ. ನಾರಾಯಣ ಪಿಳ್ಳೈ ಅವರು ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನವಿದೆ.


Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed