ಆರೆಂಜ್ ಪಿಕ್ಸಲ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಸಿಪಾಯಿ‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ರಜತ್ ಮಯಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಸಿದ್ಧಾರ್ಥ್ ಮಹೇಶ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಶ್ರುತಿ ಹರಿಹರನ್. ಸಂಚಾರಿ ವಿಜಯ್, ಅಚ್ಯುತ ಕುಮಾರ್, ಗೌರೀಶ್ ಅಕ್ಕಿ, ಕೃಷ್ಣ ಹೆಬ್ಬಾಳೆ, ಭರತ್ ಸಿಂಗ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಪರಮೇಶ್ ಛಾಯಾಗ್ರಹಣ ಹಾಗೂ ಅಕ್ಷಯ್ ಪಿ ರಾವ್ ಸಂಕಲನ ಈ ಚಿತ್ರಕ್ಕಿದೆ.