‘ದೊಡ್ಮನೆ ಹುಡ್ಗ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣ
Posted date: 30 Thu, Apr 2015 – 09:41:38 AM

ಅಜಯ್ ಪಿಕ್ಚರ‍್ಸ್ ಲಾಂಛನದಲ್ಲಿ ಎಂ.ಗೋವಿಂದು ಅವರು ನಿರ್ಮಿಸುತ್ತಿರುವ ‘ದೊಡ್ಮನೆ ಹುಡ್ಗ ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಪೂರ್ಣವಾಗಿದೆ. ಬೆಂಗಳೂರು, ಮೈಸೂರು, ಮಂಡ್ಯ ಮುಂತಾದ ಕಡೆ ೨೩ದಿನಗಳ ಚಿತ್ರೀಕರಣ ನಡೆದಿದೆ. ದ್ವಿತೀಯ ಹಂತದ ಚಿತ್ರೀಕರಣ ಸದ್ಯದಲ್ಲೇ ಆರಂಭವಾಗಲಿದೆ ಎಂದು ನಿರ್ದೇಶಕ ಸೂರಿ ತಿಳಿಸಿದ್ದಾರೆ.
ಪವರ್‌ಸ್ಟಾರ್ ಪುನೀತ್‌ರಾಜಕುಮಾರ್ ಈ ಚಿತ್ರದ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ಸೂರಿ ಹಾಗೂ ವಿಕಾಸ್ ಅವರು ಬರೆದಿರುವ ಕಥೆಗೆ ಸೂರಿ ಅವರೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.  ಸತ್ಯ ಹೆಗಡೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ದೀಪು.ಎಸ್.ಕುಮಾರ್ ಸಂಕಲನ, ಶಶಿಧರ ಅಡಪ ಅವರ ಕಲಾ ನಿರ್ದೇಶನವಿದೆ. ವಿ.ಹರಿಕೃಷ್ಣ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಯೋಗರಾಜ್ ಭಟ್ ಹಾಗೂ ಜಯಂತ ಕಾಯ್ಕಿಣಿ ರಚಿಸಿದ್ದಾರೆ.   
ರೆಬಲ್‌ಸ್ಟಾರ್ ಅಂಬರೀಶ್, ಪುನೀತ್‌ರಾಜಕುಮಾರ್, ಸುಮಲತ ಅಂಬರೀಶ್, ಭಾರತಿ ವಿಷ್ಣುವರ್ಧನ, ರಾಧಿಕಾ ಪಂಡಿತ್, ಶ್ರೀನಿವಾಸಮೂರ್ತಿ, ಅವಿನಾಶ್, ರಂಗಾಯಣ ರಘು, ರವಿಸಂಕರ್, ಉದಯ್, ಚಿಕ್ಕಣ್ಣ, ಸಂತೋಷ್ ರಾಜವರ್ಧನ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed