ಸಂದೇಶ್ ಕಂಬೈನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜು ಅವರು ನಿರ್ಮಿಸಿರುವ ‘ಐರಾವತ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಅಭಿನಯಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಊರ್ವಶಿ ರೌಟೆಲ, ಪ್ರಕಾಶ್ ರೈ, ಸಾಧುಕೋಕಿಲ, ಅವಿನಾಶ್, ಅಶೋಕ್ ಮುಂತಾದವರಿದ್ದಾರೆ.
ಎ.ಪಿ.ಅರ್ಜುನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಶೇಖರ್ಚಂದ್ರ ಛಾಯಾಗ್ರಹಣ, ದೀಪು.ಎಸ್.ಕುಮಾರ್ ಸಂಕಲನ, ಕಲೈ, ಗಣೇಶ್ ನೃತ್ಯ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ರಂಗಸ್ವಾಮಿ ಅವರ ನಿರ್ಮಾಣ ನಿರ್ವಹಣೆಯಿದೆ.