ನ್ಯೂ ಇಯರ್ ಗೆ ಬಂತು ``ಮ್ಯಾಟ್ನಿ``ಚಿತ್ರದ ಮಾಸ್ ಹಾಡು ಡಾಲಿ ಧನಂಜಯ ಬಿಡುಗಡೆ ಮಾಡಿ ಶುಭ ಕೋರಿದ
Posted date: 01 Mon, Jan 2024 11:05:00 AM
ನೀನಾಸಂ ಸತೀಶ್ ಹಾಗೂ ರಚಿತಾರಾಮ್ "ಅಯೋಗ್ಯ" ಚಿತ್ರದ ನಂತರ ನಟಿಸಿರುವ ಚಿತ್ರ "ಮ್ಯಾಟ್ನಿ". ಬಹು ನಿರೀಕ್ಷಿತ ಈ ಚಿತ್ರದ " ಬಾರೋ ಬಾರೋ ಬಾಟಲ್ ತಾರೋ" ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.  ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ  ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ  ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ಹಾಗೂ ಶಿವರಾಜ್ ಕೆ.ಆರ್ ಪೇಟೆ ಹೆಜ್ಜೆ ಹಾಕಿದ್ದಾರೆ. ಹೊಸವರ್ಷದ ಹರುಷವನ್ನು ಹೆಚ್ಚಿಸುವ ಈ ಹಾಡಿಗೆ ಮೆಚ್ಚುಗೆ ಮಹಾಪೂರವೇ ಹರಿದು ಬರುತ್ತಿದೆ.

 F3 ಪ್ರೊಡಕ್ಷನ್ಸ್ ಲಾಂಛನದಲ್ಲಿ ಪಾರ್ವತಿ ಎಸ್ ಗೌಡ ನಿರ್ಮಿಸಿರುವ, ಮನೋಹರ್ ಕಾಂಪಲ್ಲಿ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.  ಸುಧಾಕರ್ ಎಸ್ ರಾಜ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ "ಮ್ಯಾಟ್ನಿ" ಚಿತ್ರಕ್ಕಿದೆ. ನೀನಾಸಂ ಸತೀಶ್, ರಚಿತಾ ರಾಮ್, ಅದಿತಿ  ಪ್ರಭುದೇವ, ನಾಗಭೂಷಣ, ಶಿವರಾಜ ಕೆ.ಆರ್ ಪೇಟೆ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. 
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed