ಪಾಂಡವಪುರದ ಸುತ್ತಮುತ್ತ ‘ದೊಡ್ಮನೆ ಹುಡ್ಗ
Posted date: 01 Wed, Apr 2015 – 08:46:18 AM

ಅಜಯ್ ಪಿಕ್ಚರ‍್ಸ್ ಲಾಂಛನದಲ್ಲಿ ಎಂ.ಗೋವಿಂದು ಅವರು ನಿರ್ಮಿಸುತ್ತಿರುವ ‘ದೊಡ್ಮನೆ ಹುಡ್ಗ ಚಿತ್ರಕ್ಕೆ ಪಾಂಡವಪುರದ ಸುತ್ತಮುತ್ತ ಬಿರುಸಿನ ಚಿತ್ರೀಕರಣ ನಡೆಯುತ್ತಿದೆ.  
  ಪವರ್‌ಸ್ಟಾರ್ ಪುನೀತ್‌ರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಸೂರಿ ನಿರ್ದೇಶಿಸುತ್ತಿದ್ದಾರೆ.  ಸೂರಿ ಹಾಗೂ ವಿಕಾಸ್ ಅವರು ಬರೆದಿರುವ ಕಥೆಗೆ ಸೂರಿ ಅವರೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ.  ಸತ್ಯ ಹೆಗಡೆ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ದೀಪು.ಎಸ್.ಕುಮಾರ್ ಸಂಕಲನ, ಶಶಿಧರ ಅಡಪ ಅವರ ಕಲಾ ನಿರ್ದೇಶನವಿದೆ.  
    ರೆಬಲ್‌ಸ್ಟಾರ್ ಅಂಬರೀಶ್, ಪುನೀತ್‌ರಾಜಕುಮಾರ್, ಸುಮಲತ ಅಂಬರೀಶ್, ಭಾರತಿ ವಿಷ್ಣುವರ್ಧನ, ರಾಧಿಕಾ ಪಂಡಿತ್, ಶ್ರೀನಿವಾಸಮೂರ್ತಿ, ಅವಿನಾಶ್, ರಂಗಾಯಣ ರಘು, ರವಿಸಂಕರ್, ಉದಯ್, ಚಿಕ್ಕಣ್ಣ, ಸಂತೋಷ್ ರಾಜವರ್ಧನ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed