ಸ್ಟಾರ್ ನಿರ್ದೇಶಕ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅನಾವರಣ ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಲ ಐದು ಚಿತ್ರಗಳಿಗೆ ಚಾಲನೆ
Posted date: 25 Thu, Jan 2024 12:15:24 PM
ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್ ಚಂದ್ರು ಸಾರಥ್ಯದ ಆರ್ ಸಿ ಸ್ಟುಡಿಯೋಸ್ ಉದ್ಘಾಟನೆಯಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿದರು. ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
 
ರಿಯಲ್ ಸ್ಟಾರ್ ಉಪೇಂದ್ರ, ಮಾಜಿ ಸಚಿವ ಎಚ್‍.ಎಂ. ರೇವಣ್ಣ, ಮುಂಬೈನ ಖ್ಯಾತ ನಿರ್ಮಾಪಕ ಮತ್ತು ವಿತರಕರಾದ ಆನಂದ್‍ ಪಂಡಿತ್‍, ನಿರ್ಮಾಪಕ ಜಾಕ್‍ ಮಂಜು, ಅಲಂಕಾರ್ ಪಾಂಡಿಯನ್‍,ಉದ್ಯಮಿಗಳಾದ ರಾಮಚಂದ್ರೇ ಗೌಡ, ಮಂಜುನಾಥ ಹೆಗಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹಾಗೂ ಶ್ರೀಮತಿ  ಗೀತಾ ಶಿವರಾಜಕುಮಾರ್ ವಿಡಿಯೋ ಮೂಲಕ ಆರ್ ಸಿ ಸ್ಟುಡಿಯೋಸ್ ಗೆ ಶುಭ ಕೋರಿದರು. `ಶ್ರೀ ರಾಮ ಬಾಣ`, `ಕಬ್ಜ 2`, `ಪಿಓಕೆ`, `ಫಾದರ್`ಮತ್ತು `ಡಾಗ್` ಚಿತ್ರಗಳ ಅಧಿಕೃತ ಘೋಷಣೆ ಈ ಸಂದರ್ಭದಲ್ಲಿ ಆಗಿದೆ. ಈ ಪೈಕಿ `ಕಬ್ಜ 2` ಚಿತ್ರವನ್ನು ಮಾತ್ರ ಆರ್ ಚಂದ್ರು ಅವರು ನಿರ್ದೇಶಿಸುತ್ತಿದ್ದು, ಮಿಕ್ಕ ಚಿತ್ರಗಳನ್ನು  ಬೇರೆಬೇರೆ ನಿರ್ದೇಶಕರು ನಿರ್ದೇಶಿಸಲಿದ್ದಾರೆ. ಈ ಎಲ್ಲಾ ಚಿತ್ರಗಳನ್ನು ಆರ್.ಸಿ. ಸ್ಟುಡಿಯೋಸ್‍ ನಿರ್ಮಿಸಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಆರ್ ಚಂದ್ರು, ನಮ್ಮ ಆರ್ ಸಿ ಸ್ಟುಡಿಯೋಸ್ ಗೆ ಇಂದು ಸನ್ಮಾನ್ಯ ಮುಖ್ಯಮಂತ್ರಿಗಳು ಚಾಲನೆ ನೀಡಿದ್ದಾರೆ. ಈ ಸಂಸ್ಥೆಯಿಂದ ಏಕಕಾಲಕ್ಕೆ ನಿರ್ಮಾಣವಾಗಲಿರುವ ಐದು ಚಿತ್ರಗಳು ಇಂದು ಅಧಿಕೃತವಾಗಿ ಆರಂಭವಾಗಿದೆ. ಆರ್ ಸಿ ಸ್ಟುಡಿಯೋಸ್ ನನ್ನದೊಬ್ಬನ್ನದಲ್ಲ. ಇಲ್ಲಿರುವ ಮಂಜುನಾಥ ಹೆಗಡೆ, ಸೋದರ ಸಮಾನರಾದ ರಾಮಚಂದ್ರೇ ಗೌಡರು, ಮುಂಬೈನಿಂದ ಬಂದಿರುವ ಆನಂದ್ ಪಂಡಿತ್  ಹಾಗೂ ಅಲಂಕಾರ್ ಪಾಂಡಿಯನ್ ಎಲ್ಲರೂ ನಮ್ಮ ಸಂಸ್ಥೆಯ ಆಧಾರ ಸ್ತಂಭಗಳು. ಅವರೆಲ್ಲರ ಸಹಕಾರಕ್ಕೆ ನಾನು ಚಿರ ಋಣಿ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed