`ಗೂಗ್ಲಿ` ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ
Posted date: 22 Fri, Feb 2013 ? 09:31:19 AM

ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ಅವರು ನಿರ್ಮಿಸುತ್ತಿರುವ ‘ಗೂಗ್ಲಿ ಚಿತ್ರಕ್ಕೆ ಈ ತಿಂಗಳ ಇಪ್ಪತ್ತೈದರಿಂದ ಕೊನೆಯ ಹಂತದ ಚಿತ್ರೀಕರಣ ಏಳು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ. ಪವನ್ ಒಡೆಯರ್ ನಿರ್ದೇಶನದ ಈ ಚಿತ್ರಕ್ಕೆ ಬೆಂಗಳೂರು, ಸಕಲೇಶಪುರ, ಮೂಡಬಿದಿರೆ, ಮಂಗಳೂರು ಮುಂತಾದಕಡೆ ನಲವತ್ತು ದಿನಗಳ ಚಿತ್ರೀಕರಣ ನಡೆದಿದೆ.
ಯಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಕೃತಿಖರಬಂದ. ಅನಂತಾನಾಗ್, ಸುಧಾಬೆಳವಾಡಿ, ಸಾಧುಕೋಕಿಲಾ, ನೀನಾಸಂ ಅಶ್ವತ್ ಮುಂತಾದವರು ‘ಗೂಗ್ಲಿ ಚಿತ್ರದ ತಾರಾಬಳಗದಲ್ಲಿದ್ದಾರೆ.
ವೈದಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಜೋಶ್ವಶ್ರೀಧರ್ ಸಂಗೀತ ನೀಡಿದ್ದಾರೆ. ಸನತ್ ಸುರೇಶ್ ಸಂಕಲನ, ಪಳನಿರಾಜ್, ರವಿವರ್ಮ ಸಾಹಸ ನಿರ್ದೇಶನ, ಮುರಳಿ ನೃತ್ಯ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಪವನ್ ಒಡೆಯರ್, ಯೋಗರಾಜ್‌ಭಟ್, ಜಯಂತಕಾಯ್ಕಿಣಿ, ಕವಿರಾಜ್ ಬರೆದಿದ್ದಾರೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed