ಯೋಗರಾಜ್ ಮೂವೀಸ್ ಹಾಗೂ ವೇದಂ ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಪರಪಂಚ‘ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ವೆಜ್ ಎಂಡ್ ನಾನ್ವೆಜ್ ಎಂಬ ಅಡಿಬರಹವಿರುವ ಈ ಚಿತ್ರದಲ್ಲಿ ಐದು ಹಾಡುಗಳಿದ್ದು ನಾಲ್ಕು ಹಾಡುಗಳನ್ನು ಯೋಗರಾಜ್ಭಟ್ ಹಾಗೂ ಒಂದು ಹಾಡನ್ನು ಜಯಂತಕಾಯ್ಕಿಣಿ ಬರೆದಿದ್ದಾರೆ. ವೀರಸಮರ್ಥ್ ಸಂಗೀತ ನೀಡುತ್ತಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಸುರೇಶ್ ಸಂಕಲನ ಹಾಗೂ ಶಶಿಧರ್ ಅಡಪರ ಕಲಾ ನಿರ್ದೇಶನ ‘ಪರಪಂಚ‘ಕ್ಕಿದೆ. ಡಾ:ರವಿರಾಜ್ ಹಾಗೂ ರುದ್ರಪ್ಪ ಈ ಚಿತ್ರದ ಸಹ ನಿರ್ಮಾಪಕರು.
ದಿಗಂತ್ ನಾಯಕರಾಗಿ ಅಭಿನಯಿಸುತ್ತಿರುವ ಈ ಚಿತ್ರದ ನಾಯಕಿ ರಾಗಿಣಿ. ಯೋಗರಾಜ್ಭಟ್, ದತ್ತಣ್ಣ, ಕೆ.ಎಸ್.ಎಲ್.ಸ್ವಾಮಿ, ಅನಂತನಾಗ್, ವಿ.ಮನೋಹರ್, ವಿಕಾಸ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಾಯಕ ಯೋಗೀಶ್ ಈ ಚಿತ್ರದ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ‘ಜಯಮ್ಮನ ಮಗ‘ ಚಿತ್ರದ ನಿರ್ದೇಶಕ ವಿಕಾಸ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.