`ಬ್ರಹ್ಮ`ಈ ವಾರ ತೆರೆಗೆ
Posted date: 04 Tue, Feb 2014 – 09:31:00 AM

ಮೈಲಾರಿ ಎಂಟರ್ ಪ್ರೈಸಸ್ ಲಾಂಛನದಲ್ಲಿ ಮಂಜುನಾಥ ಬಾಬು(ಅಮೃತಹಳ್ಳಿ) ನಿರ್ಮಿಸಿರುವ `ಬ್ರಹ್ಮ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಆರ್.ಚಂದ್ರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಉಪೇಂದ್ರ ಅಭಿನಯಿಸಿದ್ದಾರೆ.  ಪ್ರಣೀತಾ, ರಂಗಾಯಣರಘು, ಸಾಧುಕೋಕಿಲ, ಶಯ್ಯಾಜಿ ಶಿಂಧೆ, ನಾಜರ್, ರಾಹುಲ್‌ದೇವ್, ಸೋನು ಸೂಧ್,ಸುಭಾಷ್ ಶೆಟ್ಟಿ, ಗಿರೀಶ್ ಕಾರ್ನಾಡ್, ಕಾಟ್ ರಾಜು, ಬುಲೆಟ್ ಪ್ರಕಾಶ್, ಜಾನ್ ಕೊಕೇನ್, ಮಂಗಳೂರು ಸುರೇಶ್, ಲಕ್ಷ್ಮಣ್, ಶರಣ್, ಪದ್ಮಜಾರಾವ್, ಸುಚೇಂದ್ರಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಶೇಖರ್ ಚಂದ್ರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ, ಶಿವಕುಮಾರ್, ಇಸ್ಮಾಯಿಲ್ ಕಲಾ ನಿರ್ದೇಶನ, ಥ್ರಿಲ್ಲರ್ ಮಂಜು, ವಿಜಯ್ ಸಾಹಸ ನಿರ್ದೇಶನ ಹಾಗೂ ಪ್ರದೀಪ್ ಆಂಟೋನಿ ಅವರ ನೃತ್ಯ ನಿರ್ದೇಶನ `ಬ್ರಹ್ಮ `ಚಿತ್ರಕ್ಕಿದೆ.

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed