ಗುಬ್ಬಿ ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ನಮ್ ದುನಿಯಾ ನಮ್ ಸ್ಟೈಲ್ ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಕಾಶ್ಮೀರದಲ್ಲಿ ನಡೆಯಲಿದೆ. ಎರಡು ಹಾಡುಗಳಿಗೂ ಹರ್ಷ ನೃತ್ಯ ನಿರ್ದೇಶನ ಮಾಡಲಿದ್ದಾರೆ. ಸುನಿಲ್, ಕಾವ್ಯಾ, ಲಿಖಿತ್, ಮಿಲನನಾಗರಾಜ್ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.
ಪ್ರೀತಂಗುಬ್ಬಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಶಾನ್ರೆಹಮಾನ್ ಸಂಗೀತ, ದೀಪು.ಎಸ್.ಕುಮಾರ್ ಸಂಕಲನ, ಹರ್ಷ ನೃತ್ಯ ನಿರ್ದೇಶನ, ರವಿವರ್ಮ ಸಾಹಸ ನಿರ್ದೇಶನ, ಮೋಹನ್.ಬಿ.ಕೆರೆ ಕಲಾ ನಿರ್ದೇಶನ ಹಾಗೂ ಯೋಗಿ ಸಹ ನಿರ್ದೇಶನ ಮಾಡುವುದರೊಂದಿಗೆ ಕಾರ್ಯಕಾರಿ ನಿರ್ಮಾಪಕರೂ ಆಗಿರುವ ಈ ಚಿತ್ರಕ್ಕೆ ಪ್ರೀತಂ ಹರ್ಷ ಸಂಭಾಷಣೆ ಬರೆದಿದ್ದಾರೆ. ಕೃಷ್ಣನಾಗಪ್ಪ, ಸುನಿಲ್, ವಿನಾಯಕಜೋಷಿ, ಲಿಖಿತ್ಶೆಟ್ಟಿ, ಮಿಲನನಾಗರಾಜ್, ಕಾವ್ಯಾಶೆಟ್ಟಿ, ರಂಗಾಯಣರಘು, ಸಾಧುಕೋಕಿಲಾ, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.