ಕೆ.ಮಂಜು ಸಿನಿಮಾಸ್ ಲಾಂಛನದಲ್ಲಿ ಕೆ.ಮಂಜು ಅವರು ನಿರ್ಮಿಸುತ್ತಿರುವ `ದಿಲ್ರಂಗೀಲಾ` ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಗೋವಾದಲ್ಲಿ ನಡೆಯುತ್ತಿದೆ. ಹರ್ಷ ನೃತ್ಯ ನಿರ್ದೇಶನ ಮಾಡುತ್ತಿರುವ ಈ ಹಾಡುಗಳ ಚಿತ್ರೀಕರಣದಲ್ಲಿ ಗಣೇಶ್, ರಚಿತಾರಾಂ ಹಾಗೂ ನರ್ತಕರು ಅಭಿನಯಿಸುತ್ತಿದ್ದಾರೆ.
ಗೋಲ್ಡನ್ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರವನ್ನು ಪ್ರೀತಂಗುಬ್ಬಿ ನಿರ್ದೇಶಿಸುತ್ತಿದ್ದಾರೆ. ರಚಿತರಾಂ, ಪ್ರಿಯಾಂಕರಾವ್, ದತ್ತಣ್ಣ, ರಂಗಾಯಣರಘು, ಅಚ್ಯುತಕುಮಾರ್, ಯಮುನ, ಶ್ರೀನಿಧಿ, ಗಿರಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ನಿರ್ದೇಶಕರೇ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಎಚ್.ಸಿ.ವೇಣು ಅವರ ಛಾಯಾಗ್ರಹಣವಿದೆ. ಅರ್ಜುನ್ಜನ್ಯ ಸಂಗೀತ ನಿರ್ದೇಶನ, ದೀಪು.ಎಸ್.ಕುಮಾರ್ ಸಂಕಲನ, ಮುರಳಿ ನೃತ್ಯ ನಿರ್ದೇಶನ ಹಾಗೂ ಯೋಗಿ ಸಹನಿರ್ದೇಶನವಿರುವ ‘ದಿಲ್ರಂಗೀಲಾಕ್ಕೆ ಪ್ರಶಾಂತ್ ಸಂಭಾಷಣೆ ಬರೆದಿದ್ದಾರೆ. ಯೋಗರಾಜ್ಭಟ್, ಜಯಂತಕಾಯ್ಕಿಣಿ, ಅರ್ಜುನ್ ಗೀತರಚನೆ ಮಾಡಿದ್ದಾರೆ.