ಡಿ.ಸತ್ಯಪ್ರಕಾಶ್ ನಿರ್ದೇಶನದ ``X&Y``ಚಿತ್ರದ ಚಿತ್ರೀಕರಣಕ್ಕೆ ಚಾಲನೆ
Posted date: 21 Thu, Dec 2023 05:45:28 PM
ಸತ್ಯ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಇತ್ತೀಚಿಗೆ ಮುಹೂರ್ತ ಕಂಡ ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯಪ್ರಶಸ್ತಿ ವಿಜೇತ ನಿರ್ದೇಶಕ ಡಿ.ಸತ್ಯಪ್ರಕಾಶ್ ನಿರ್ದೇಶನದ "X&Y" ಚಿತ್ರದ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ. ಡಿಸೆಂಬರ್ 21 ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಿರುವ ಚಿತ್ರತಂಡ,  ಫ್ಯಾಂಟಸಿ ಮತ್ತು ಭಾವನಾತ್ಮಕ ದೃಶ್ಯಗಳಿಂದ "X&Y" ಪ್ರೇಕ್ಷಕರನ್ನು ತೇಲಿಸಲಿದೆ ಎನ್ನುತ್ತಾರೆ ನಿರ್ದೇಶಕ ಡಿ.ಸತ್ಯಪ್ರಕಾಶ್.  
 
ಒಂದು ತಿಂಗಳು ಶೂಟಿಂಗ್ ಮುಗಿಸಿ, ಹೊಸವರ್ಷದ ಫೆಬ್ರವರಿಯಲ್ಲಿ ಮಂಗಳೂರಿಗೆ ಪ್ರಯಾಣ ಬೆಳಸಲಿದೆ. 
 
"X&Y" ಹೊಸ ಚಿತ್ರದಲ್ಲಿ ಸತ್ಯಪ್ರಕಾಶ್ ಮತ್ತು ಅಥರ್ವ ಪ್ರಕಾಶ್ ನಾಯಕರಾಗಿ ಅಭಿನಯಿಸುತ್ತಿದ್ದು, ಲವಿತ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತ ನಿರ್ದೇಶನ, ಬಿ.ಎಸ್ ಕೆಂಪರಾಜ್ ಸಂಕಲನವಿದ್ದು, ವರದರಾಜ್ ಕಾಮತ್ ಕಲಾ ನಿರ್ದೇಶನ ಮಾಡುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed