ದುಬೈ ನಲ್ಲಿ ``ಜಸ್ಟ್ ಪಾಸ್``
Posted date: 10 Sun, Dec 2023 09:44:15 AM
ರಾಯ್ಸ್ ಎಂಟರ್  ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ "ಜಸ್ಟ್ ಪಾಸ್" ಚಿತ್ರದ ಟೀಸರ್ ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ "ದುಬೈ ದಸರಾ" ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ "ಜಸ್ಟ್ ಪಾಸ್" ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್‌ 13‌ ರಂದು ಈ ಚಿತ್ರದ ಟೀಸರ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.

ಶ್ರೀ, ಪ್ರಣತಿ, ರಂಗಾಯಣರಘು ಸಾಧುಕೋಕಿಲ ಸುಚೇಂದ್ರ ಪ್ರಸಾದ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ, ಗೋವಿಂದೇಗೌಡ, ದಾನಪ್ಪ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed