ಉಪೇಂದ್ರ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪ್ರಿಯಾಂಕ ಉಪೇಂದ್ರ ಅವರು ನಿರ್ಮಿಸಿರುವ ‘ಉಪ್ಪಿ ೨’ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಉಪೇಂದ್ರ ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಹಾಡುಗಳನ್ನು ಬರೆದು ನಿರ್ದೇಶನವನ್ನು ಮಾಡಿದ್ದಾರೆ. ಅಶೋಕ್ ಕಶ್ಯಪ್ ಛಾಯಾಗ್ರಹಣ, ಗುರುಕಿರಣ್ ಸಂಗೀತ ನಿರ್ದೇಶನ ಹಾಗೂ ಶ್ರೀ ಕ್ರೇಜಿಮೈಂಡ್ಸ್ ಸಂಕಲನ ಈ ಚಿತ್ರಕ್ಕಿದೆ.
ಉಪೇಂದ್ರ ಅವರು ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿಯರು ಕ್ರಿಸ್ಟಿನ ಅಕೀವ ಹಾಗೂ ಪಾರೂಲ್ ಯಾದವ್. ಶಿಯಾಜಿ ಶಿಂಧೆ, ಶೊಭ್ರಾಜ್, ಟೇನ್ನಿಸ್ಕೃಷ್ಣ, ಬ್ಯಾಂಕ್ ಜನಾರ್ದನ್, ಚೇತನ್, ಬಿರಾದಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.