ಮಾತಿನಮನೆಯಲ್ಲಿ `ಬಚ್ಚನ್ `
Posted date: 24 Mon, Dec 2012 ? 09:48:43 AM

ಶ್ರೀ ವೆಂಕಟೇಶ್ವರ ಕೃಪಾ ಎಂಟರ್‌ಟೈನರ‍್ಸ್ ಲಾಂಛನದಲ್ಲಿ ಉದಯ್.ಕೆ ಮೆಹತಾ ನಿರ್ಮಿಸಿ, ಶಶಾಂಕ್ ಕಥೆ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಕಿಚ್ಚ ಸುದೀಪ್ ಅಭಿನಯದ ‘ಬಚ್ಚನ್ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ.
    ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಮೂರು ಹಾಡುಗಳ ಚಿತ್ರೀಕರಣ ಬಾಕಿಯಿದ್ದು,  ಜನವರಿಯಲ್ಲಿ ಹಾಡುಗಳ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಶಶಾಂಕ್ ತಿಳಿಸಿದ್ದಾರೆ.
   ಸುದೀಪ್, ಪರೂಲ್ ಯಾದವ್, ತುಲಿಪ್‌ಜೋಷಿ, ಭಾವನಾ ಮೆನನ್, ಆಶಿಶ್ ವಿದ್ಯಾರ್ಥಿ, ರವಿಶಂಕರ್ ಮತ್ತು ತೆಲುಗಿನ ಖ್ಯಾತನಟ ಜಗಪತಿ ಬಾಬು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಶೇಖರ್ ಚಂದ್ರು ರವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ

Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed