ಲೀಡರ್ ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಪುತ್ರಿ ಪರಿಣಿತ ಅಭಿನಯ
Posted date: 06 Wed, Jul 2016 – 10:48:47 PM
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ‘ಲೀಡರ್’ ಚಿತ್ರದಲ್ಲಿ ನಟ ಶ್ರೀನಗರ ಕಿಟ್ಟಿ ಮತ್ತು ಭಾವನಾ ಬೆಳೆಗೆರೆ ದಂಪತಿಯ ಪುತ್ರಿ ಪರಿಣಿತ ಅಭಿನಯಿಸುತ್ತಿದ್ದಾರೆ. ಶಿವರಾಜಕುಮಾರ್ ಮಗಳ ಪಾತ್ರದಲ್ಲಿ ಪರಿಣಿತ ಕಾಣಿಸಿಕೊಳ್ಳಲಿದ್ದಾರೆ.
‘ರೋಸ್’ ಚಿತ್ರ ಖ್ಯಾತಿಯ ಸಹನಾ ಮೂರ್ತಿ ನಿರ್ದೇಶಿಸುತ್ತಿರುವ ‘ಲೀಡರ್’ ಚಿತ್ರದಲ್ಲಿ ಶಿವರಾಜ್ ಕುಮಾರ್ ಅವರ ಜೊತೆಗೆ ಪ್ರಣೀತ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ವಿಜಯ ರಾಘವೇಂದ್ರ, ಗುರು ಜಗ್ಗೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಆಗಸ್ಟ್‌ನಲ್ಲಿ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.
ಹಾರ್ದಿಕ್ ತರುಣ್ ಕಂಬೈನ್ಸ್ ಲಾಂಛನದಲ್ಲಿ  ತರುಣ್ ಶಿವಪ್ಪ ಮತ್ತು ಹಾರ್ದಿಕ್ ಗೌಡ ಸೇರಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ವೀರಸಮರ್ಥ್ ಸಂಗೀತ, ಗುರುಪ್ರಶಾಂತ್ ರೈ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನವಿದೆ.
 
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed