`ಶಿವಾರ್ಜುನ` ಚಿತ್ರದಲ್ಲಿ ರವಿಕಿಶನ್ ನಟನೆ
Posted date: 26 Thu, Sep 2019 10:52:31 AM

ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸುತ್ತಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ `ಶಿವಾರ್ಜುನ` ಚಿತ್ರದಲ್ಲಿ ಗೋರಕ್ ಪುರ್ ಲೋಕಸಭಾ ಸದಸ್ಯ ಹಾಗೂ ಖ್ಯಾತ ಭೋಜ್‌ಪುರಿ ನಟ ರವಿಕಿಶನ್ ವಿಲನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಇವರು `ಹೆಬ್ಬುಲಿ` ಚಿತ್ರದಲ್ಲಿ ಅಭಿನಯಿಸಿದ್ದರು. ಸದ್ಯ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ಡಬ್ಬಿಂಗ್ ಸಹ ಮುಗಿದಿದೆ.        

ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಮುಂತಾದ ಕಡೆ ಚಿತ್ರೀಕರಣ ನಡೆಯುತ್ತಿದೆ. ಹೆಚ್.ಸಿ.ವೇಣು ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸುರಾಗ್ ಸಂಗೀತ ನೀಡುತ್ತಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ರವಿವರ್ಮ, ವಿನೋದ್, ಥ್ರಿಲ್ಲರ್ ಮಂಜು  ಅವರ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.  ಯೋಗರಾಜ್ ಭಟ್ ಹಾಗೂ ಚೇತನ್‌ಕುಮಾರ್(ಬಹದ್ದೂರ್) ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಅಮೃತ, ಅಕ್ಷತ, ತಾರಾ, ಅವಿನಾಶ್, ಕುರಿ ಪ್ರತಾಪ್, ದಿನೇಶ್ ಮಂಗಳೂರು, ಸಾಧುಕೋಕಿಲ, ರವಿ ಕಿಶನ್, ತರಂಗ ವಿಶ್ವ, ಕೆ.ಆರ್.ಪೇಟೆ ಶಿವರಾಜ್, ನಯನ ಮುಂತಾದವರಿದ್ದಾರೆ. ನಟಿ ತಾರಾ ಹಾಗೂ ಛಾಯಾಗ್ರಾಹಕ ವೇಣು ಪುತ್ರ ಶ್ರೀಕೃಷ್ಣ ಕೂಡ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಶಿವಾರ್ಜುನ` ಚಿತ್ರದಲ್ಲಿ ರವಿಕಿಶನ್ ನಟನೆ - Chitratara.com
Copyright 2009 chitratara.com Reproduction is forbidden unless authorized. All rights reserved.