ಉದಯ್ ಕೆ ಮೆಹ್ತಾ ನಿರ್ಮಿಸುತ್ತಿರುವ ಸಿಂಗ ಮುಹೂರ್ತ
Posted date: 29 Thu, Nov 2018 08:15:33 AM

ಯು ಕೆ ಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಕೆ ಮೆಹ್ತಾ ಅವರು ನಿರ್ಮಿಸುತ್ತಿರುವ ‘ಸಿಂಗ‘ ಚಿತ್ರದ  ಮುಹೂರ್ತ ಸಮಾರಂಭ ನವಂಬರ್ ೨೮ರ ಬುಧವಾರದಂದು ಬಸವೇಶ್ವರ ನಗರದ ಶ್ರೀವಿನಾಯಕ ದೇವಸ್ಥಾನದಲ್ಲಿ ನೆರವೇರಿತು. ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಧ್ರುವ ಸರ್ಜಾ ಆರಂಭ ಫಲಕ ತೋರಿದರು. ಚಿತ್ರದ ಟೈಟಲ್ ಟೀಸರ್ ಕೂಡ ಧ್ರುವ ಸರ್ಜಾ ಅವರಿಂದಲೇ ಅನಾವರಣವಾಯಿತು.

ಈ ಹಿಂದೆ ‘ರಾಮ್‌ಲೀಲಾ‘ ಚಿತ್ರವನ್ನು ನಿರ್ದೇಶಿಸಿದ್ದ ವಿಜಯ್ ಕಿರಣ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕಿರಣ್ ಹಂಪಾಪುರ ಛಾಯಾಗ್ರಹಣ, ಧರ್ಮ ವಿಶ್ ಸಂಗೀತ ನಿರ್ದೇಶನ, ಡಾ||ಕೆ.ರವಿವರ್ಮ, ಪಳನಿರಾಜ್ ಸಾಹಸ ನಿರ್ದೇಶನ, ಗಣೇಶ್ ಸಂಕಲನ ಹಾಗೂ ಶಿವಾರ್ಜುನ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ಡಾ||ವಿ.ನಾಗೇಂದ್ರ ಪ್ರಸಾದ್, ಕವಿರಾಜ್ ಹಾಗೂ ಚೇತನ್ ‘ಸಿಂಗ‘ ಚಿತ್ರದ ಹಾಡುಗಳನ್ನು ಬರೆಯುತ್ತಿದ್ದಾರೆ.

ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅದಿತಿ ಪ್ರಭುದೇವ. ರವಿಶಂಕರ್, ತಾರಾ, ಶಿವರಾಜ್ ಕೆ.ಆರ್ ಪೇಟೆ, ಅರುಣಾ ಬಾಲರಾಜ್, ರಂಜಿತಾ, ಚಂದ್ರಪ್ರಭ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 


Kannada Cinema's Latest Wallpapers
Kannada Cinema's Latest Videos
Kannada Movie/Cinema News - ಉದಯ್ ಕೆ ಮೆಹ್ತಾ ನಿರ್ಮಿಸುತ್ತಿರುವ ಸಿಂಗ ಮುಹೂರ್ತ - Chitratara.com
Copyright 2009 chitratara.com Reproduction is forbidden unless authorized. All rights reserved.