ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ಸಂದರ್ಭದಲ್ಲಿ ಈ ಯಶಸ್ವಿ ಚಿತ್ರ ಅಬುದಾಬಿ ಹಾಗೂ ದುಬೈನಲ್ಲೂ ಪ್ರದರ್ಶನಗೊಂಡಿದೆ. ಅಲ್ಲಿನ ಕನ್ನಡಿಗರು ಅಪ್ಪಟ ಮನೋರಂಜನೆಯ ಈ ಚಿತ್ರಕ್ಕೆ ಫಿದಾ ಆಗಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ರಶ್ಮಿ ವೆಂಕಟೇಶ್ , ಸೆಂದಿಲ್ ಮತ್ತು ತಂಡದವರು "ಕೃಷ್ಣಂ ಪ್ರಣಯ ಸಖಿ" ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದ್ದರು. ಗೋಲ್ಡನ್ ಸ್ಟಾರ್ ಗಣೇಶ್, ನಾಯಕಿ ಮಾಳವಿಕ ನಾಯರ್, ನಟ ರಂಗಾಯಣ ರಘು, ನಿರ್ದೇಶಕ ಶ್ರೀನಿವಾಸರಾಜು, ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ ಸೇರಿದಂತೆ ಚಿತ್ರತಂಡದ ಸದಸ್ಯರು ಈ ವಿಶೇಷ ಪ್ರದರ್ಶನದಲ್ಲಿ ಭಾಗವಹಿಸಿದ್ದರು.
ಸುಮಾರು 750ಕ್ಕೂ ಅಧಿಕ ಕನ್ನಡಿಗರು ಈ ಚಿತ್ರವನ್ನು ನೋಡಿ ಸಂಭ್ರಮಿಸಿದರು. ಚಿತ್ರದ ಹಾಡುಗಳಿಗೆ ಹೆಜ್ಜೆ ಹಾಕಿದರು.
ನಮ್ಮ ಚಿತ್ರಕ್ಕೆ ನೀವು ನೀಡುತ್ತಿರುವ ಪ್ರೋತ್ಸಾಹಕ್ಕೆ ಮನ ತುಂಬಿ ಬಂದಿದೆ ಎಂದು ನಾಯಕ ಗೋಲ್ಡನ್ ಸ್ಟಾರ್ ಗಣೇಶ್ ಈ ಸಂದರ್ಭದಲ್ಲಿ ತಿಳಿಸಿದರು.