ಲಾಫಿಂಗ್ ಬುದ್ಧ ಚಿತ್ರದ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರದ ಅಪ್ಡೇಟ್ ಕೊಟ್ಟ ಪ್ರಮೋದ್ ಶೆಟ್ಟಿ
Posted date: 01 Sun, Sep 2024 01:29:56 PM
ಅವರ ಹುಟ್ಟುಹಬ್ಬದ ಪ್ರಯುಕ್ತ ಕಾರಿಕಾನು ಗುಡ್ಡದ ಮೇಲೊಂದು ಅಧಿಕಪ್ರಸಂಗ ಚಿತ್ರತಂಡ ಹುಟ್ಟುಹಬ್ಬಕ್ಕೆ  ಶುಭ ಕೋರುತ್ತಾ ಪೋಸ್ಟರ್ ಒಂದನ್ನು ರಿಲೀಸ್ ಮಾಡಿದೆ, TEASER COMMING SOON ಅಂತ ಕೂಡ ಅನೌನ್ಸ್ ಮಾಡಿದ್ದಾರೆ. 

ವಡ್ಡಾರಾಧಕ , ಶಬರಿಯಂತಹ ಕಿರುಚಿತ್ರಗಳಿಂದ ತಮ್ಮೂರಿನ ಕಥೆಗಳು ಎಲ್ಲಾ ಊರುಗಳಲ್ಲೂ ತಲುಪಬೇಕೆಂಬ ಆಶಯವುಳ್ಳ ಅನೀಶ್ ಎಸ್ ಶರ್ಮಾ ಈ ಸಿನಿಮಾದ ಮುಂದಾಳತ್ವ ವಹಿಸಿದ್ದಾರೆ. ಚಿತ್ತರಂಜನ್ ಕಶ್ಯಪ್, ವಲ್ಲಭ ಸೂರಿ ಮತ್ತು ಸುನೀತ್ ಹಲಗೇರಿ ತಮ್ಮ ಸಂಸ್ಥೆ Gunnybag Studios ಮೂಲಕ ಹೊಸ ಹೊಸ ಪ್ರಯೋಗಗಳನ್ನು ತಮ್ಮ ಚೀಲದಲ್ಲಿ ತುಂಬಿಕೊಂಡು ಅದಕ್ಕೆ ಹಣ ಹೂಡುತ್ತಿದ್ದಾರೆ.

ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರನ್ನು  ಹೊರತುಪಡಿಸಿ ರಾಘು ಶಿವಮೊಗ್ಗ, ಕಿರಣ್ ನಾಯ್ಕ್, ಮಂಜುನಾಥ್ ಹೆಗ್ಡೆ, ಚಂದ್ರಕಲಾ, ಕೆ ಜಿ ಕೃಷ್ಣಮೂರ್ತಿ ಮತ್ತು ಮುಂತಾದವರು ಬಣ್ಣ ಹಚ್ಚಿದ್ದಾರೆ. ಸುಮಂತ್ ಶರ್ಮಾ ಅವರ ಛಾಯಾಗ್ರಹಣ, ಚೇತನ್ ಕುಮಾರ್ ಸಂಗೀತ, ಸಂಜೀವ್ ಜಾಗಿರ್ದರ್ ಅವರ ಸಂಕಲನ ಈ ಚಿತ್ರಕ್ಕೆ ಶಕ್ತಿ ತುಂಬಿದೆ. ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಮುಗಿಸಿ ಇನ್ನೇನು ತಮ್ಮ ಮೊದಲ ಟೀಸರ್ ಬಿಡುಗಡೆ ಮಾಡಲು ಸಿದ್ಧರಾಗುತ್ತಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed