ಸೆಟ್ಟೇರಲು ರೆಡಿಯಾದ ಶಿವಣ್ಣನ 131ನೇ ಸಿನಿಮಾ..ಕರುನಾಡ ಕಿಂಗ್ ಭೇಟಿಯಾದ ಚಿತ್ರತಂಡ
Posted date: 22 Mon, Jul 2024 05:57:32 PM
ಕರುನಾಡ ಕಿಂಗ್ ಶಿವರಾಜ್ ಕುಮಾರ್ 131ನೇ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಇತ್ತೀಚೆಗಷ್ಟೇ ಶಿವಣ್ಣನ ಜನ್ಮದಿನಕ್ಕೆ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಮಾಡಿ ಶಿವಸೈನ್ಯವನ್ನು ಒಂಟಿಗಾಲಲ್ಲಿ ನಿಲ್ಲಿಸಿದ್ದ ಚಿತ್ರತಂಡವೀಗ ಶೂಟಿಂಗ್ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ. ಶೀಘ್ರದಲ್ಲಿಯೇ ಶಿವಣ್ಣನ 131ನೇ ಸಿನಿಮಾದ ಮುಹೂರ್ತ ನೆರವೇರಲಿದೆ. 

ಶೂಟಿಂಗ್ ಅಖಾಡಕ್ಕೆ ಇಳಿಯಲು ರೆಡಿ ಶಿವಣ್ಣ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ 131ನೇ ಸಿನಿಮಾದ ಶೂಟಿಂಗ್ ಅಖಾಡಕ್ಕೆ ಧುಮುಕಲು ಚಿತ್ರತಂಡ ಸಜ್ಜಾಗಿದೆ. ಆದಷ್ಟು ಬೇಗ ಮುಹೂರ್ತ ಮುಗಿಸಿಕೊಂಡು ಚಿತ್ರೀಕರಣ ನಡೆಸಲು ಇಡೀ ಬಳಗ ಸಜ್ಜಾಗಿದೆ. ಅದಕ್ಕಾಗಿ ಇಂದು ಇಡೀ ತಂಡ ಶಿವಣ್ಣನನ್ನು ಭೇಟಿಯಾಗಿದೆ. ಕರುನಾಡ ಕಿಂಗ್ ನಾಗವಾರ ನಿವಾಸಕ್ಕೆ ನಿರ್ದೇಶಕ ಕಾರ್ತಿಕ್ ಅದ್ವೈತ್, ನಿರ್ಮಾಪಕರಾದ ಎನ್ ಎಸ್ ರೆಡ್ಡಿ ಹಾಗೂ ಸುಧೀರ್, ಛಾಯಾಗ್ರಹಕ ಎಜೆ ಶೆಟ್ಟಿ, ಸಂಕಲನಕಾರ ದೀಪು ಎಸ್ ಕುಮಾರ್ ಭೇಟಿ ಕೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಕಾರ್ತಿಕ್ ಅದ್ವೈತ್, ಶಿವಣ್ಣನಿಗೆ ಆಕ್ಷನ್ ಕಟ್ ಹೇಳುವ ಮೂಲಕ ಸ್ಯಾಂಡಲ್ವುಡ್ ಅಂಗಳಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಂದಹಾಗೇ ಇವರಿಗೆ ಇದು ನಿರ್ದೇಶಕನಾಗಿ ಎರಡನೇ ಸಿನಿಮಾ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ನಲ್ಲಿ, ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಘೋಸ್ಟ್ ಖ್ಯಾತಿಯ ವಿಎಂ ಪ್ರಸನ್ನ ಹಾಗೂ ಸೀತಾರಾಮಂ ಖ್ಯಾತಿಯ ಜಯಕೃಷ್ಣ ಬರಹಗಾರರಾಗಿ ಸಾಥ್ ಕೊಡುತ್ತಿದ್ದಾರೆ.
 
ವಿಕ್ರಂ ವೇದ, ಆರ್ ಡಿ ಎಕ್ಸ್, ಖೈದಿ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್ ಸಂಗೀತ ಒದಗಿಸಲಿದ್ದಾರೆ. ಎ.ಜೆ ಶೆಟ್ಟಿ ಛಾಯಾಗ್ರಹಣ ನಿರ್ವಹಿಸಲಿದ್ದಾರೆ. ದೀಪು ಎಸ್ ಕುಮಾರ್ ಅವರ ಸಂಕಲನ ಹಾಗೂ ರವಿ ಸಂತೆಹಕ್ಲು ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿರಲಿದೆ. ಭುವನೇಶ್ವರಿ ಪ್ರೊಡಕ್ಷನ್ ನಡಿ ಎಸ್ ಎನ್ ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದು, ರಮಣ ರೆಡ್ಡಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed