ನವರಸ ನಾಯಕ ಜಗ್ಗೇಶ್ ಅವರಿಂದ ಬಿಡುಗಡೆಯಾಯಿತು ``ಉಂಡೆನಾಮ``ಚಿತ್ರದ ಟ್ರೇಲರ್ ಚಿತ್ರ ಏಪ್ರಿಲ್ 14 ರಂದು ತೆರೆಗೆ
Posted date: 10 Mon, Apr 2023 01:03:29 PM
ಬಹಳವರ್ಷಗಳ ನಂತರ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ "ಉಂಡೆನಾಮ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ನವರಸ ನಾಯಕ ಜಗ್ಗೇಶ್ ಟ್ರೇಲರ್ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಟ್ರೇಲರ್ ಚೆನ್ನಾಗಿದೆ. ನನ್ನ ತಮ್ಮ ಕೋಮಲ್ , ಬಹಳವರ್ಷಗಳ ನಂತರ ನಟಿಸಿರುವ ಚಿತ್ರವಿದು. "ಕೋಮಲ್ ಕಾಮಿಡಿ ಪಾತ್ರಗಳನ್ನು ನೋಡಿದಾಗ, ಎಷ್ಟೋ ಸಲ ನಾನು ಅಂದುಕೊಂಡಿದ್ದೀನಿ ಇವನ ಹಾಗೆ ನಾನು ಕಾಮಿಡಿ ಕಲಿಯಬೇಕು" ಅಂತ. ಅಷ್ಟು ಉತ್ತಮ ಕಲಾವಿದ ಕೋಮಲ್. ನಿರ್ದೇಶಕರು ಲಾಕ್ ಡೌನ್ ಸನ್ನಿವೇಶವನ್ನಿಟ್ಟುಕೊಂಡು ಹಾಸ್ಯ ಚಿತ್ರ ಮಾಡಿದ್ದಾರೆ.
ನಿರ್ಮಾಪಕರು ಸೇರಿದಂತೆ ಇಡೀ ತಂಡಕ್ಕೆ ಒಳ್ಳೆಯದಾಗಲಿ. ಚಿತ್ರ ಯಶಸ್ವಿಯಾಗಲಿ ಎಂದು ಜಗ್ಗೇಶ್ ಹಾರೈಸಿದರು. 

ಬಹಳ ದಿನಗಳ ನಂತರ ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕ ರಾಜಶೇಖರ್ ಅವರು ಹೇಳಿದ ಕಥೆ ಇಷ್ಟವಾಯಿತು. ನನ್ನ ಜೊತೆ ನಟಿಸಿರುವ ತಬಲನಾಣಿ, ಹರೀಶ್ ರಾಜ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಏಪ್ರಿಲ್ 14 ಚಿತ್ರ ತೆರೆಗೆ ಬರಲಿದೆ. ನೋಡಿ ಹಾರೈಸಿ ಎಂದರು ನಾಯಕ ಕೋಮಲ್ ಕುಮಾರ್.

ಮೊದಲ ಲಾಕ್ ಡೌನ್ ನಲ್ಲಿ ಕಥೆ ಬರೆದೆ. ಆನಂತರ ನಿರ್ಮಾಪಕ ನಂದಕಿಶೋರ್ ಅವರ ಬಳಿ ಕಥೆ ಹೇಳಿದಾಗ, ಅವರು ಈ ಚಿತ್ರವನ್ನು ಕೋಮಲ್ ಅವರು ಮಾಡಬೇಕು ಎಂದರು. ನಾನು ಕೋಮಲ್ ಅವರಿಗಾಗಿಯೇ ಈ ಕಥೆ ಮಾಡಿದೆ. ಆದರೆ ಅವರು ನಟಿಸಲು ಒಪ್ಪುತ್ತಾರೊ? ಇಲ್ಲವೊ? ಎಂಬ ಆತಂಕವಿತ್ತು. ಕಥೆ ಕೇಳಿದ ಕೋಮಲ್ ಅವರು, ಈ ಕಥೆ ಚೆನ್ನಾಗಿದೆ. ನಾನಲ್ಲ. ಯಾರು ಮಾಡಿದರೂ ಈ ಚಿತ್ರ ಯಶಸ್ವಿಯಾಗುತ್ತದೆ ಎಂದರು. ಅದು ಅವರ ದೊಡ್ಡ ಗುಣ. ಸಹಕಾರ ನೀಡಿದ ನಿರ್ಮಾಪಕರಿಗೆ, ತಂತ್ರಜ್ಞರಿಗೆ ಹಾಗೂ ಕಲಾವಿದರಿಗೆ ನನ್ನ ಅಭಿನಂದನೆ ಎಂದರು ನಿರ್ದೇಶಕ ಕೆ.ಎಲ್ ರಾಜಶೇಖರ್.

ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಜಗ್ಗೇಶ್ ಅವರಿಗೆ ಧನ್ಯವಾದ. ಇಡೀ ತಂಡದ ಶ್ರಮದಿಂದ "ಉಂಡೆನಾಮ" ಚಿತ್ರ ಚೆನ್ನಾಗಿ ಬಂದಿದೆ. ಏಪ್ರಿಲ್ 14 ಚಿತ್ರ ಬಿಡುಗಡೆಯಾಗಲಿದೆ. ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕರಾದ ಟಿ.ಆರ್ ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್.

ಚಿತ್ರದಲ್ಲಿ ನಟಿಸಿರುವ ಹರೀಶ್ ರಾಜ್, ತಬಲನಾಣಿ, ಅಪೂರ್ವ ಹಾಗೂ ಸಂಗೀತ ನಿರ್ದೇಶಕ ಶ್ರೀಧರ್ ವಿ ಸಂಭ್ರಮ್ ಚಿತ್ರದ ಕುರಿತು ಮಾತನಾಡಿದರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed