ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ ``wolf``ಚಿತ್ರಕ್ಕೆ ವಿಶೇಷ ಗೀತೆ ಹಾಡಿದ ವಿಜಯ್ ಸೇತುಪತಿ
Posted date: 06 Mon, Feb 2023 10:15:46 AM
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ "wolf" ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.  

ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್  ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು. 

 ವಿನು ವೆಂಕಟೇಶ್  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ. 

ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed