ರಿಲೀಸ್ ಆಯ್ತು,`ಕಬ್ಜ`ಚಿತ್ರದ ವಿಶೇಷ ವರದಿ ಹೊತ್ತ `ಚಿತ್ತಾರ` ಪತ್ರಿಕೆಯ ಕಲರ್ ಫುಲ್ ಕವರ್‌ಪೇಜ್ ಮತ್ತು ಪೋಸ್ಟರ್
Posted date: 28 Tue, Feb 2023 12:25:40 PM
ಸದ್ಯ ಪ್ಯಾನ್ ಇಂಡಿಯಾ ಹಂತದಲ್ಲಿ ಟ್ರೆಂಡಿ0ಗ್ನಲ್ಲಿರುವ ಸಿನಿಮಾ ಎಂದರೆ `ಕಬ್ಜ`. ಈಗಾಗಲೇ ತನ್ನ ಟೀಸರ್, ಎರಡು ಹಾಡುಗಳಿಂದ ಜನರ ಮನ ಗೆದ್ದಿರುವ `ಕಬ್ಜ`ಚಿತ್ರದಿಂದ ಇದೀಗ ಪಡ್ಡೆ ಹುಡುಗರ ಹೃದಯಕ್ಕೆ ಹತ್ತಿರವಾಗುವ ಹಾಡೊಂದು ಬಿಡುಗಡೆಯಾಗಿದೆ.  ಹೌದು ಇತ್ತೀಚೆಗೆ ಆರ್.ಚಂದ್ರು ಅವರ ತವರು ಶಿಡ್ಲಘಟ್ಟದಲ್ಲಿ "ಕಬ್ಜ" ಚಿತ್ರದ ‘ಚುಮ್ ಚುಮ್ ಚಳಿ ಚಳಿ . ತಬ್ಕೊ ಚಳುವಳಿ’ ಎಂಬ ಮಾಸ್ ಹಾಡು ಅಪಾರ ಜನಸಾಗರದ ನಡುವೆ ಬಿಡುಗಡೆಯಾಯಿತು. ಪ್ರಮೋದ್ ಮರವಂತೆ ಬರೆದಿರುವ ಈ ಹಾಡನ್ನು  ಐರಾ ಉಡುಪಿ, ಮನೀಶ್ ದಿನಕರ್ ಹಾಗೂ ಸಂತೋಷ್ ವೆಂಕಿ ಹಾಡಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಇದೇ ಸಂದರ್ಭದಲ್ಲಿ `ಕಬ್ಜ’ ಚಿತ್ರದ ವಿಶೇಷ ವರದಿ ಹೊತ್ತ `ಚಿತ್ತಾರ` ಕವರ್ಪೇಜ್ ಮತ್ತು ಪೋಸ್ಟರ್ ಕೂಡ ಬಿಡುಗಡೆಯಾಯ್ತು. `ಚಿತ್ತಾರ`
 
ಶಿಡ್ಲಘಟ್ಟದ ಜೂನಿಯರ್ ಕಾಲೇಜ್ ನೆಹರು ಮೈದಾನದಲ್ಲಿ ನಡೆದ ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ನಟ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ಆರೋಗ್ಯ ಸಚಿವ ಡಾಕ್ಟರ್ ಕೆ. ಸುಧಾಕರ್, ಶಿಡ್ಲಘಟ್ಟದ ಶಾಸಕರಾದ. ಮುನಿಯಪ್ಪ, ಸಮಾಜ ಸೇವಕ ರಾಮಚಂದ್ರ ಗೌಡರು, ಹೆಚ್.ಎಂ. ರೇವಣ್ಣ, ವಿತರಕ ಆನಂದ್ ಪಂಡಿತ್ ಸೇರಿದಂತೆ ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು. ಇನ್ನು, ಈ ಅದ್ಭುತ ಕಾರ್ಯಕ್ರಮಕ್ಕೆ ವೆಂಕಟೇಶ್ ಅವರು ಪತ್ರಿಕಾ ಸಂಪರ್ಕಾಧಿಕಾರಿಯ ಜವಾಬ್ದಾರಿ ಹೊತ್ತಿದ್ದರು.
 
ಈ ಅದ್ದೂರಿ ಕಾರ್ಯಕ್ರಮವನ್ನು ಈಗಲ್ ಮಿಡಿಯಾ’ದ ನವರಸನ್ ಅಚ್ಚುಕ್ಕಟ್ಟಾಗಿ ನಿರ್ವಹಿಸಿದರು. ಖ್ಯಾತ ನಿರೂಪಕಿ ಅನುಶ್ರೀ ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಈ ಕಾರ್ಯಕ್ರಮಕ್ಕೆ ಪ್ರದೀಪ್ ಈಶ್ವರ್ ನೇತೃತ್ವದ `ಪರಿಶ್ರಮ ಅಕಾಡೆಮಿ’ಯ ಪ್ರಾಯೋಜಕತ್ವ ಇತ್ತು.  ಅಂದ ಹಾಗೆ ಅಪ್ಪು ಹುಟ್ಟುಹಬ್ಬದ ಪ್ರಯುಕ್ತ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ಇದೇ ಮಾರ್ಚ್ 17ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.  ಈ ಚಿತ್ರದ ಮುಖ್ಯವಾದ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಅಭಿನಯ ಮಾಡಿದ್ದಾರೆ.  ಕಾರ್ಯಕಾರಿ ನಿರ್ಮಾಪಕರಾಗಿ ಅಲಂಕಾರ್ ಪಾಂಡ್ಯನ್ ಸಾಥ್ ನೀಡಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed