ಸದಭಿರುಚಿ ಚಿತ್ರಗಳ ನಿರ್ಮಾಪಕರಾದ ರಮೇಶ್ ರೆಡ್ಡಿ ನಿರ್ಮಾಣದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಪ್ರಥಮ ನಿರ್ದೇಶನದ, ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ "45" ಚಿತ್ರದ ನಾಯಕಿಯಾಗಿ ಕೌಸ್ತುಭ ಮಣಿ ಆಯ್ಕೆಯಾಗಿದ್ದಾರೆ.
ಕಲರ್ಸ್ ಕನ್ನಡದ "ನನ್ನರಸಿ ರಾಧೆ", ಜೀ ತೆಲುಗಿನ ಪ್ರಸಿದ್ದ ಧಾರಾವಾಹಿ ಹಾಗೂ ಕನ್ನಡದ ರಾಮಾಚಾರಿ 2.0 ಚಿತ್ರದಲ್ಲಿ ಕೌಸ್ತುಭ ಮಣಿ ನಟಿಸಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ.