ಮೇಘನರಾಜ್ ರೀ ಎಂಟ್ರಿ ಚಿತ್ರ ``ತತ್ಸಮ ತದ್ಭವ`` ಚಿತ್ರೀಕರಣ ಪೂರ್ಣ
Posted date: 15 Sat, Apr 2023 08:53:41 AM
`ತತ್ಸಮ ತದ್ಭವ` ಚಿತ್ರದ ಮೂಲಕ ಮೇಘನರಾಜ್ ರೀ ಎಂಟ್ರಿ ಕೊಟ್ಟಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ನಿಜವಾದ ಸ್ನೇಹಿತರು ಯಾವಾಗಲೂ ಜೊತೆಗಿರುತ್ತಾರೆ. ಅಂತಹ ಸ್ನೇಹಿತರು ನನಗಿದ್ದಾರೆ. ನನಗಾಗಿ ಈ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮರು ಪ್ರವೇಶ ಮಾಡಿದ್ದೇನೆ. ಪನ್ನಗ ಭರಣ ಹಾಗೂ ಸ್ಪೂರ್ತಿ ಅನಿಲ್ ನಿರ್ಮಾಣ ಮಾಡಿದ್ದಾರೆ. ವಿಶಾಲ್ ಆತ್ರೇಯ ಒಳ್ಳೆಯ ಕಥೆ ಮಾಡಿಕೊಂಡು ನಿರ್ದೇಶನ ಮಾಡಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ ಈವರೆಗೂ ನಾನು ಇಂತಹ ಪಾತ್ರ ಮಾಡಿಲ್ಲ. ಮುಂದೆ ಮಾಡುತ್ತೀನೊ, ಇಲ್ಲವೊ? ಗೊತ್ತಿಲ್ಲ ಎಂದರು ಮೇಘನರಾಜ್.

ನನಗೆ ನಿರ್ದೇಶಕರು ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ಕಥೆಯಲ್ಲಿ  ಒಂದು ಮುಖ್ಯಪಾತ್ರ ಬರುತ್ತದೆ. ಈ ಪಾತ್ರ ಯಾರು ಮಾಡುತ್ತಿದ್ದಾರೆ ಎಂದು ಕೇಳಿದೆ. ಅವರು ನೀವೆ ಮಾಡುತ್ತಿದ್ದೀರ ಎಂದರು. ಸ್ನೇಹಿತರ ಸಿನಿಮಾ‌ದಲ್ಲಿ ಅಭಿನಯಿಸಿದ ಖುಷಿಯಿದೆ  ಎಂದು ಪ್ರಜ್ವಲ್ ದೇವರಾಜ್ ತಿಳಿಸಿದರು.

ಇದೊಂದು ಇನ್ವೆಸ್ಟಿಕೇಶನ್ ಕ್ರೈಮ್ ಥ್ರಿಲ್ಲರ್. ಕನ್ನಡದಲ್ಲಿ ಇಂತಹ ಕಥೆ ಬಂದಿರುವುದು ಅಪರೂಪ. ನೋಡುಗರಿಗೂ ಇಷ್ಟವಾಗಬಹುದೆಂಬ ನಂಬಿಕೆಯಿದೆ ಎಂದರು ನಿರ್ದೇಶಕ ವಿಶಾಲ್ ಆತ್ರೇಯ. 

ಇಂದು ಚಿತ್ರೀಕರಣ ಮುಕ್ತಾಯವಾಗಿದೆ. ರೀರೆಕಾರ್ಡಿಂಗ್ ನಡೆಯುತ್ತಿದೆ. ಚುನಾವಣೆ ಮುಗಿದ ನಂತರ ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ಪನ್ನಗ ಭರಣ ತಿಳಿಸಿದರು.   
 
ನಟಿ ಶ್ರುತಿ ಮಾತನಾಡಿ,  ಸಮಾಜದಲ್ಲಿ ಯಾವುದೇ ಹೆಣ್ಣಿಗಾದರೂ ಅನುಕಂಪಕ್ಕಿಂತ, ಅವಕಾಶ ಕೊಡುವುದು ಮುಖ್ಯ. ಮೇಘನಾ ರಾಜ್ ವಿಷಯದಲ್ಲಿ, ಅವರ ಸ್ನೇಹಿತರೆಲ್ಲರೂ ಸೇರಿ ಅವರ ರೀ ಎಂಟ್ರಿಗೆ ಒಳ್ಳೆಯ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿಸಿ, ನಾನು ಈ ಚಿತ್ರದಲ್ಲಿ ಮನಶಾಸ್ತ್ರಜ್ಞೆಯಾಗಿ ಕಾಣಿಸಿಕೊಂಡಿದ್ದೇನೆ ಎಂದರು. 

  ಚಿತ್ರದಲ್ಲಿ ಒಂದು ಹಾಡಿದೆ. ರೀರೆರ್ಡಿಂಗ್ ಕೆಲಸ ನಡೆಯುತ್ತಿದೆ ಎಂದು ಸಂಗೀತ ನಿರ್ದೇಶಕ ವಾಸುಕಿ ವೈಭವ್ ಹೇಳಿದರು.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed