ಬಾಗಲಕೋಟೆಯಲ್ಲಿ``ದೇಸಾಯಿ`` ಚಿತ್ರ ಆರಂಭ.
Posted date: 18 Sat, Mar 2023 � 03:07:54 PM
ಹಿಂದಿನಿಂದಲೂ "ದೇಸಾಯಿ" ಮನೆತನಕ್ಕೆ ಅದರದೆ ಆದ ಪರಂಪರೆಯ ವೈಶಿಷ್ಟ್ಯವಿದೆ. ಇದನ್ನು ಚಲನಚಿತ್ರದ ಮೂಲಕ ತೆರೆಗೆ ತರುತ್ತಿದ್ದಾರೆ ನಿರ್ಮಾಪಕ ಮಹಾಂತೇಶ್ ವಿ ಚೊಳಚಗುಡ್ಡ. "ಲವ್ 360" ಚಿತ್ರದ ಮೂಲಕ ಎಲ್ಲರ ಮೆಚ್ಚುಗೆ ಪಡೆದಿದ್ದ ಪ್ರವೀಣ್ ಕುಮಾರ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ‌.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಾಗಲಕೋಟೆಯ ಮುಚಖಂಡಿಯ ಶ್ರೀವೀರಭದ್ರೇಶ್ವರಸ್ವಾಮಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು.  

ಚಿತ್ರದ ಮೊದಲ ಸನ್ನಿವೇಶಕ್ಕೆ  ಶಾಸಕರಾದ ಶ್ರೀ ವೀರಣ್ಣ ಚರಂತಿಮಠ ಅವರು ಆರಂಭಫಲಕ ತೋರಿದರು.  ವನಶ್ರೀಮಠ ವಿಜಯಪುರದ ಡಾ! ಜಯಬಸವಕುಮಾರ ಮಹಾಸ್ವಾಮಿಗಳು ಕ್ಯಾಮೆರಾ ಚಾಲನೆ ಮಾಡಿದರು.

ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಈ ಚಿತ್ರ ಆರಂಭವಾಯಿತು. ಗಣ್ಯರು ಚಿತ್ರತಂಡದ ಸದಸ್ಯರು ಮೊದಲಿಗೆ ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ‌  

ಡಾ! ಜಯಬಸವಕುಮಾರ ಮಹಾಸ್ವಾಮಿಜಿಗಳು ಚಿತ್ರಕ್ಕೆ ಶುಭ ಕೋರಿದರು.  

 ಇದು ನನ್ನ ಮೊದಲ ಚಿತ್ರ ಅದ್ಧೂರಿಯಾಗಿ ತೆರೆಯ ಮೇಲೆ ತರುವ ಹಾಗೆ ನಿರ್ದೇಶನಕ್ಕೆ ಸಿದ್ದ ಮಾಡಿಕೊಂಡಿದ್ದೇನೆ ಎಂದು ನಿರ್ದೇಶಕ ನಾಗಿರೆಡ್ಡಿ ಬಡ ತಿಳಿಸಿದರು.

ಚಿತ್ರದ ನಿರ್ಮಾಪಕ ಮಹಾಂತೇಶ ವಿ ಚೊಳಚಗುಡ್ಡ ಮಾತನಾಡಿ, ವಿಶಿಷ್ಟ ಕಥಾಹಂದರ ಹೊಂದಿರುವ ಕಥೆಯನ್ನು ನಾನು ಹುಡುಕುತ್ತಿದ್ದಾಗ ನನ್ನ ಯೋಚನೆಗೆ ಬಂದದ್ದು ಈ ಗತಕಾಲದ, ತನ್ನದೇ ಆದ ವೈಶಿಷ್ಟ್ಯ ಪರಂಪರೆಯನ್ನು ಹೊಂದಿರುವ "ದೇಸಾಯಿ" ಮನೆತನದ ಕುರಿತು ಸಿನಿಮಾ ಮಾಡಬೇಕು ಎಂದು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ ಎಂದರು. . 

 ಈ ಚಿತ್ರ ನನ್ನ ನಟನಾ ವೃತ್ತಿಯಲ್ಲಿ ಒಂದು ಹೊಸ ಅಧ್ಯಾಯ ಆಗಲಿದೆ ಅಂತಹ ಚಾಲೆಂಜಿಂಗ್ ಪಾತ್ರ ಇದಾಗಿದೆ. ಚಿತ್ರದ ಕಥೆ ತುಂಬಾ ಇಷ್ಟವಾಯಿತು‌‌ ಎಂದರು ನಾಯಕ ಪ್ರವೀಣ್ ಕುಮಾರ್. 

 ಮೈಸೂರು ಮೂಲದ ರಾದ್ಯಾ "ದೇಸಾಯಿ" ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ಕಲಾ ಬಿರಾದಾರ್, ಮಧುಸೂದನ್ ರಾವ್,  ನಟನ  ಪ್ರಶಾಂತ್, ವೀರೇಂದ್ರ, ಹರಿಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. 
ಜೈ ಆನಂದ್ ಛಾಯಾಗ್ರಹಣ, ಸಾಯಿಕಾರ್ತಿಕ್ ಸಂಗೀತ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಅವರ ಸಂಕಲನ ಈ ಚಿತ್ರಕ್ಕಿದೆ. ಯಲ್ಲಪ್ಪ ವಿ ಚೊಳಚಗುಡ್ಡ ಸಹ ನಿರ್ಮಾಪಕರಾಗಿರುವ ಈ ಚಿತ್ರದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆಯಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed