ಹುಟ್ಟುಹಬ್ಬದಂದೇ ಶರಣ್ ಹೊಸ ಸಿನಿಮಾ ಘೋಷಣೆ - ಶರಣ್ ಮುಂದಿನ ಚಿತ್ರಕ್ಕೆ ಅರವಿಂದ್ ಕುಪ್ಲಿಕರ್ ನಿರ್ದೇಶಕ
Posted date: 08 Wed, Feb 2023 08:15:06 AM
`ಪುಗ್ಸಟ್ಟೆ ಲೈಫು ಪುರುಸೊತ್ತೇ ಇಲ್ಲ` ಸಿನಿಮಾ ಖ್ಯಾತಿಯ ಅರವಿಂದ್ ಕುಪ್ಲಿಕರ್ ಶರಣ್ ಮುಂದಿನ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಕ್ ಹ್ಯೂಮರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಶರಣ್ ಪಾತ್ರ ಹಿಂದಿನ ಸಿನಿಮಾಗಳಿಗಿಂತ ಡಿಫ್ರೆಂಟ್ ಆಗಿರಲಿದ್ದು, ಎಲೆಕ್ಟ್ರಿಷಿಯನ್ ಪಾತ್ರ ನಿರ್ವಹಿಸುತ್ತಿದ್ದಾರೆ. ಇಂದು ಶರಣ್ ಹುಟ್ಟುಹಬ್ಬ ಆದ್ರಿಂದ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಅಧೀಕೃತ ಮಾಹಿತಿ ಹಂಚಿಕೊಂಡಿದೆ. 
 
ಶ್ರೀಧರ ಕೃಪ ಕಂಬೈನ್ಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಚಿತ್ರ ಇದಾಗಿದ್ದು, ಬಿ.ಬಸವರಾಜ್ ಹಾಗೂ ಶ್ರೀಧರ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಅರವಿಂದ್ ಕುಪ್ಲಿಕರ್ ನಿರ್ದೇಶನ ಮಾಡುತ್ತಿದ್ದಾರೆ. ಸಂಚಾರಿ ವಿಜಯ್ ಅಭಿನಯದ ‘ಪುಗ್ಸಟ್ಟೆ ಲೈಫು ಪುರುಸೋತ್ತೇ ಇಲ್ಲ’ ಸಿನಿಮಾ ನಂತರ ಅರವಿಂದ್ ಕುಪ್ಲಿಕರ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಸಿನಿಮಾವಿದು. ಬಾಗಲಕೋಟೆಯಲ್ಲಿ ನಡೆಯುವ ಕಥೆಯನ್ನು ಚಿತ್ರ ಒಳಗೊಂಡಿದ್ದು, ಉತ್ತರ ಕರ್ನಾಟಕ ಶೈಲಿ ಭಾಷೆಯಲ್ಲಿ ಶರಣ್ ಗಮನ ಸೆಳೆಯಲಿದ್ದಾರೆ ಎಂದು ನಿರ್ದೇಶಕ ಅರವಿಂದ್ ಕುಪ್ಲಿಕರ್ ತಿಳಿಸಿದ್ದಾರೆ. 

ಅಚ್ಯುತ್ ಕುಮಾರ್, ರಂಗಾಯಣ ರಘು ಸೇರಿದಂತೆ ಹೊಸ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದು, ಇದೇ ತಿಂಗಳ 20ರಿಂದ ಚಿತ್ರೀಕರಣ ಆರಂಭವಾಗಲಿದೆ. ಚಿತ್ರದ ಟೈಟಲ್ ಹಾಗೂ ಸಿನಿಮಾ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ಚಿತ್ರತಂಡ ಹಂಚಿಕೊಳ್ಳಲಿದೆ. ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಉಲ್ಲಾಸ್ ಹೈದೂರ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed