ಗೌರಿ-ಗಣೇಶ ಹಬ್ಬಕ್ಕೆ ಬರ್ಕ್ಲಿ ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆಯಾಗಿದೆ
Posted date: 11 Sat, Sep 2021 06:59:41 PM
ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಈ‌ ಚಿತ್ರಕ್ಕೆ ಸುಮಂತ್ ಕ್ರಾಂತಿ ನಿರ್ದೇಶನ.  ವಿಭಿನ್ನ ಕಥಾಹಂದರ ಹೊಂದಿರುವ  "ಬರ್ಕ್ಲಿ" ಚಿತ್ರದ ಲಿರಿಕಲ್ ಸಾಂಗ್ ಗೌರಿ - ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. 
ಬಹದ್ದೂರ್ ಚೇತನ್ ಅವರು ಬರೆದಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಸುಮಧುರವಾಗಿ ಹಾಡಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. 

ಸಂತೋಷ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಆನೇಕಲ್ ಬಾಲರಾಜ್ ಅವರು ನಿರ್ಮಿಸಿರುವ ಬರ್ಕ್ಲಿ ಚಿತ್ರದ  ಪ್ರಥಮಪ್ರತಿ‌ ಸದ್ಯದಲ್ಲೇ ಸಿದ್ದವಾಗಲಿದೆ.
.
ಕರಿಯ, ಗಣಪ, ಕರಿಯ 2  ಚಿತ್ರಗಳನ್ನು ನಿರ್ಮಿಸಿರುವ ಆನೇಕಲ್ ಬಾಲರಾಜ್ ಅವರ ನಿರ್ಮಾಣದ ಮತ್ತೊಂದು ಅದ್ದೂರಿ ಚಿತ್ರ "ಬರ್ಕ್ಲಿ‌". ಉತ್ತಮ‌ ಮನೋರಂಜನೆಯ ಈ ಚಿತ್ರಕ್ಕೆ ಸುಮಂತ್ ಕ್ರಾಂತಿ  ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.
ಗಣಪ, ಕರಿಯ 2 ಚಿತ್ರಗಳಲ್ಲಿ ನಟಿಸಿ  ಖ್ಯಾತಿಗಳಿಸಿರುವ ಸಂತೋಷ್ ಬಾಲರಾಜ್ ಈ ಚಿತ್ರದ ನಾಯಕರಾಗಿ ಅಭಿನಯಿಸಿದ್ದಾರೆ. 
ಬಾಲ್ಯದಲ್ಲಿ ಕೇಂದ್ರ ಸರ್ಕಾರದ ನೋ ಸ್ಮೋಕಿಂಗ್ ಜಾಹೀರಾತಿನ ಮೂಲಕ ಬಾಲನಟಿಯಾಗಿ ಖ್ಯಾತರಾಗಿದ್ದ, ಸಿಮ್ರಾನ್ ನಾಟೇಕರ್ ಈ ಚಿತ್ರದ ನಾಯಕಿ.
ಬಹುಭಾಷ ನಟ ಚರಣರಾಜ್, ಖ್ಯಾತ ನಟಿ ಶೃತಿ, ಬಲ ರಾಜವಾಡಿ , ಬುಲೆಟ್ ಪ್ರಕಾಶ್ ಮುಂತಾದವರ ತಾರಾಬಳಗ ಈ ಚಿತ್ರದಲ್ಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed