ಕನ್ನಡ್ ಗೊತ್ತಿಲ್ಲ ವಿಶೇಷ ಪಾತ್ರದಲ್ಲಿ ಸುಧಾರಾಣಿ
Posted date: 07 Thu, Mar 2019 04:16:51 PM

 ರಾಮರತ್ನ ಪ್ರೊಡಕ್ಷನ್ಸ್ ಮೂಲಕ  ಕುಮಾರ ಕಂಠೀರವ ಅವರು ನಿರ್ಮಿಸುತ್ತಿರುವ, ಆರ್‌ಜೆ ಮಯೂರ್ ಅವರ  ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕನ್ನಡ್ ಗೊತ್ತಿಲ್ಲ ಕನ್ನಡ ಭಾಷಾ ಪ್ರೇಮವನ್ನು ಸಾರುವ ಚಿತ್ರವಾಗಿದೆ. ಈಗಾಗಲೇ ಸತತ ೩೦ ದಿನಗಳ ಕಾಲ ಬೆಂಗಳೂರು ಸುತ್ತಮುತ್ತ ತನ್ನ ಚಿತ್ರೀಕರಣವನ್ನು ಮಾಡಿ ಮುಗಿಸಿ ಸಧ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದಲ್ಲಿ ಕನ್ನಡದ ಹಿರಿಯ ನಟಿ ಸುಧಾರಾಣಿ ಅವರು ಪ್ರಮುಖವಾಗಿ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ವಿಶೇಷ ಎಂದರೆ ಅದು ಬರೀ ಬಂದು ಹೋಗುವಂಥ ಪಾತ್ರವಲ್ಲ, ಇಡೀ ಕಥೆಗೆ ತಿರುವು ಕೊಡುವಂಥ ಪಾತ್ರವದು, ಈ ಥರದ ಪಾತ್ರವನ್ನು ಅವರು ಈವರೆಗೆ ಮಾಡಿಯೇ ಇಲ್ಲ ಎಂದು ನಿರ್ದೇಶಕ ಮಯೂರ ರಾಘವೇಂದ್ರ ಹೇಳಿದ್ದಾರೆ. ಹೊರ ರಾಜ್ಯಗಳಿಂದ ಬರುವ ಅನ್ಯಭಾಷಿಗರು ಹಲವಾರು ವರ್ಷಗಳಿಂದಲೂ ಕರ್ನಾಟಕದಲ್ಲೇ ನೆಲೆಸಿದ್ದರೂ ಕನ್ನಡ ಭಾಷೆಯನ್ನು ಕಲಿತಿರುವುದಿಲ್ಲ. ಅವರನ್ನು ಕನ್ನಡದಲ್ಲಿ ಮಾತನಾಡಿಸಲು ಪ್ರಯತ್ನಿಸಿದರೂ ಕೂಡ ಸಾರಿ, ನಮಗೆ ಕನ್ನಡ್ ಗೊತ್ತಿಲ್ಲ ಎಂದು ಬಹಳ ಸುಲಭವಾಗಿ ಹೇಳಿಬಿಡುತ್ತಾರೆ. ಇಂಥದೇ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ನಿರ್ಮಿಸಲಾಗುತ್ತಿರುವ ಕನ್ನಡ್ ಗೊತ್ತಿಲ್ಲ ಒಂದು ಥ್ರಿಲ್ಲರ್ ಚಿತ್ರವಾಗಿದೆ.  ಈ ಚಿತ್ರದಲ್ಲಿ  ಬೆಡಗಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆ ಗಿರಿಧರ್ ದಿವಾನ್ ಅವರ ಛಾಯಾಗ್ರಹಣ ಹಾಗೂ ಸಂಕಲನವಿದೆ. ನಕುಲ್ ಅಭಯಂಕರ ಅವರ ಸಂಗೀತ ಸಂಯೋಜನೆಯಿದೆ. ಈ ಚಿತ್ರದಲ್ಲಿ ಹರಿಪ್ರಿಯ, ಸುಧಾರಾಣಿ,  ಪವನ್‌ಕುಮಾರ್, ಧರ್ಮಣ್ಣ, ಸಂತೋಷ್ ಕರ್ಕಿ ಹಾಗೂ ಇತರರು ಅಭಿನಯಿಸಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಕನ್ನಡ್ ಗೊತ್ತಿಲ್ಲ ವಿಶೇಷ ಪಾತ್ರದಲ್ಲಿ ಸುಧಾರಾಣಿ - Chitratara.com
Copyright 2009 chitratara.com Reproduction is forbidden unless authorized. All rights reserved.