``ಫಾರೆಸ್ಟ್``ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯ
Posted date: 23 Tue, Jul 2024 06:33:53 PM
ಕನ್ನಡದಲ್ಲೀಗ ಕಂಟೆಂಟ್ ಓರಿಯಂಟೆಡ್ ಚಿತ್ರಗಳದೇ ಕಾರುಬಾರು. ಉತ್ತಮ ಕಂಟೆಂಟ್ ಇರುವ ಚಿತ್ರಗಳು ಇತ್ತೀಚಿಗೆ ಯಶಸ್ವಿಯಾಗಿರುವ ಉದಾಹರಣೆಗಳು ಕನ್ನಡದಲ್ಲಿ ಸಾಕಷ್ಟಿದೆ. ಅಂತಹುದೇ ಉತ್ತಮ ಕಂಟೆಂಟ್ ನೊಂದಿಗೆ ಕನ್ನಡಿಗರ ಮುಂದೆ ಬರಲಿದೆ "ಫಾರೆಸ್ಟ್" ಚಿತ್ರ.   
 
ಎನ್.ಎಂ.ಕೆ ಸಿನಿಮಾಸ್ ಲಾಂಛನದಲ್ಲಿ ಎನ್ ಎಂ ಕಾಂತರಾಜ್ ನಿರ್ಮಾಣದ, ಚಂದ್ರ ಮೋಹನ್ ನಿರ್ದೇಶನದ ಹಾಗೂ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ಫಾರೆಸ್ಟ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಈ ಚಿತ್ರಕ್ಕಾಗಿ ಪುನೀತ್ ಆರ್ಯ ಅವರು ಬರೆದು ಧರ್ಮವಿಶ್ ಸಂಗೀತ ನೀಡಿರುವ "ಓಡೋ ಓಡೋ" ಹಾಡು ಎನ್ ಎಂ ಕೆ  ಸಿನಿಮಾಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಖ್ಯಾತ ಗಾಯಕ ಕೈಲಾಶ್ ಖೇರ್ ಹಾಡಿರುವ ಈ ಹಾಡನ್ನು ಈಗಾಗಲೇ ಹನ್ನೊಂದು ಲಕ್ಷಕ್ಕೂ ಅಧಿಕ ಜನರು ವೀಕ್ಷಿಸಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈ ಮಲ್ಟಿಸ್ಟಾರರ್ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದೆ. ಮಡಿಕೇರಿ, ಎಂ.ಎಂ.ಹಿಲ್ಸ್, ಸಂಪಾಜೆ ಫಾರೆಸ್ಟ್ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. 

ನಿರ್ದೇಶಕ ಚಂದ್ರಮೋಹನ್ ಅವರು ಸತ್ಯಶೌರ್ಯ ಸಾಗರ್ ಅವರ ಜೊತೆಗೂಡಿ  ಕಥೆ, ಚಿತ್ರಕಥೆ ರಚಿಸಿದ್ದಾರೆ. ಸಂಭಾಷಣೆಯನ್ನು ಸತ್ಯಶೌರ್ಯ ಸಾಗರ್ ಅವರೆ ಬರೆದಿದ್ದಾರೆ. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಹಿನ್ನೆಲೆ ಸಂಗೀತ ಆನಂದ್ ರಾಜವಿಕ್ರಮ್ ಅವರದು.  ರವಿಕುಮಾರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಅಮರ್  ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ "ಫಾರೆಸ್ಟ್" ಚಿತ್ರಕ್ಕಿದೆ.  

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್ ಕುಮಾರ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed