``ಕೆ ಜಿ ಎಫ್``, ``ಕಾಂತಾರ``ಚಿತ್ರಗಳ ನಂತರ ಭಾರತದಾದ್ಯಂತ ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದ``ಕಬ್ಜ``
Posted date: 18 Sat, Mar 2023 03:10:15 PM
ಬಹು ನಿರೀಕ್ಷಿತ ಕನ್ನಡದ ಹೆಮ್ಮೆಯ ಪ್ಯಾನ್ ಇಂಡಿಯಾ ಸಿನಿಮಾ " ಕಬ್ಜ " ಮಾರ್ಚ್ 17 ರಂದು ಬಿಡುಗಡೆಯಾಗಿ, ಭಾರತದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 
 
"ಕೆ.ಜಿ.ಎಫ್", " ಕಾಂತಾರ " ಚಿತ್ರಗಳ ನಂತರ ದೇಶದಾದ್ಯಂತ "ಕಬ್ಜ" ಕನ್ನಡದ ಕೀರ್ತಿ ಪತಾಕೆಯನ್ನು ಮತ್ತೊಮ್ಮೆ ಹಾರಿಸಿದೆ.
ಬಿಡುಗಡೆಯಾದ ಮೊದಲ ದಿನವೇ ಭಾರತಾದ್ಯಂತ 54ಕೋಟಿಗೂ ಹೆಚ್ಚು `ಬಾಕ್ಸ್ ಆಫೀಸ್` ಕಲೆಕ್ಷನ್ ಆಗಿದೆ ಎಂದು ಮಾಹಿತಿ ಲಭ್ಯವಾಗಿದೆ.  ಮೂಲಗಳ ಪ್ರಕಾರ    ಎರಡನೇ ದಿನವೇ ಐವತ್ತು ಕೋಟಿಗೂ ಅಧಿಕ ಕಲೆಕ್ಷನ್ ಆಗಬಹುದೆಂಬ ಮಾತು ಕೇಳಿ ಬರುತ್ತಿದೆ. ಭಾರತದಾಚೆಗೂ "ಕಬ್ಜ" ಸಿನಿಮಾ ಬಿಡುಗಡೆಯಾಗಿದ್ದು, ಅಲ್ಲೂ ಕೂಡ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.‌ 
ಆರ್ ಚಂದ್ರು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ರಿಯಲ್  ಸ್ಟಾರ್ ಉಪೇಂದ್ರ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಹಾಗೂ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯಿಸಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed