`ಕನ್ನಡ್ ಗೊತ್ತಿಲ್ಲ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 21 Thu, Nov 2019 12:03:12 PM

ರಾಮರತ್ನ ಪ್ರೊಡಕ್ಷನ್ಸ್ ಮೂಲಕ  ಕುಮಾರ ಕಂಠೀರವ ಅವರು ನಿರ್ಮಿಸಿರುವ ‘ಕನ್ನಡ್ ಗೊತ್ತಿಲ್ಲ‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಆರ್ ಜೆ ಮಯೂರ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಕನ್ನಡ್ ಗೊತ್ತಿಲ್ಲ‘ ಕನ್ನಡ ಭಾಷಾ ಪ್ರೇಮವನ್ನು ಸಾರುವ ಚಿತ್ರವಾಗಿದೆ. ಈ ಚಿತ್ರ ನವಂಬರ್‌ನಲ್ಲೇ ತೆರೆಗೆ ಬರುತ್ತಿರುವುದು ವಿಶೇಷ.

ಹೊರ ರಾಜ್ಯಗಳಿಂದ ಬರುವ ಅನ್ಯಭಾಷಿಗರು ಹಲವಾರು ವರ್ಷಗಳಿಂದಲೂ ಕರ್ನಾಟಕದಲ್ಲೇ ನೆಲೆಸಿದ್ದರೂ ಕನ್ನಡ ಭಾಷೆಯನ್ನು ಕಲಿತಿರುವುದಿಲ್ಲ. ಅವರನ್ನು ಕನ್ನಡದಲ್ಲಿ ಮಾತನಾಡಿಸಲು ಪ್ರಯತ್ನಿಸಿದರೂ ಕೂಡ ಸಾರಿ, ನಮಗೆ ಕನ್ನಡ್ ಗೊತ್ತಿಲ್ಲ ಎಂದು ಬಹಳ ಸುಲಭವಾಗಿ ಹೇಳಿಬಿಡುತ್ತಾರೆ. ಇಂಥದೇ ವಿಷಯವನ್ನು ಪ್ರಮುಖವಾಗಿಟ್ಟುಕೊಂಡು ನಿರ್ಮಿಸಿರುವ ‘ಕನ್ನಡ್ ಗೊತ್ತಿಲ್ಲ‘ ಒಂದು ಥ್ರಿಲ್ಲರ್ ಚಿತ್ರವಾಗಿದೆ.  ಈ ಚಿತ್ರದಲ್ಲಿ  ಬೆಡಗಿ ಹರಿಪ್ರಿಯಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸುಧಾರಾಣಿ, ಪವನ್ ಕುಮಾರ್, ಧರ್ಮಣ್ಣ, ಸಂತೋಷ್ ಕರ್ಕಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಈ ಚಿತ್ರಕ್ಕೆ ಗಿರಿಧರ್ ದಿವಾನ್ ಅವರ ಛಾಯಾಗ್ರಹಣ ಹಾಗೂ ಸಂಕಲನವಿದೆ. ನಕುಲ್ ಅಭಯಂಕರ ಅವರ ಸಂಗೀತ ಸಂಯೋಜನೆಯಿದೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಕನ್ನಡ್ ಗೊತ್ತಿಲ್ಲ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.