`ಜಿಗ್ರಿ ದೋಸ್ತ್` ಚಿತ್ರದ ಚಿತ್ರೀಕರಣ ಪೂರ್ಣ
Posted date: 30 Thu, May 2019 08:49:53 AM

ಎ.ಎನ್.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿ.ಎನ್.ಗಂಗಾಧರ್ ಅವರು ನಿರ್ಮಿಸುತ್ತಿರುವ ‘ಜಿಗ್ರಿ ದೋಸ್ತ್‘ ಚಿತ್ರದ ಚಿತ್ರೀಕರಣ ಪೂರ್ಣವಾಗಿದೆ. ಚಿತ್ರವನ್ನು ಜೂನ್‌ನಲ್ಲಿ ತೆರೆಗೆ ತರುವ ಸಾಧ್ಯತೆಯಿದೆ. ಅದಕ್ಕೂ ಮುನ್ನ ಚಿತ್ರದ ಹಾಡುಗಳು ಬಿಡುಗಡೆಯಾಗಲಿದೆ. ಬೆಂಗಳೂರು, ದಾಂಡೇಲಿ ಮುಂತಾದ ಕಡೆ ಚಿತ್ರಕ್ಕೆ ೪೨ದಿನಗಳ ಚಿತ್ರೀಕರಣ ನಡೆದಿದೆ.

ಎಸ್.ಮೋಹನ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ತಾರಾಬಳಗದಲ್ಲಿ ಸ್ಕಂದ ಅಶೋಕ್(ರಾಧಾರಮಣ ಖ್ಯಾತಿ), ಚೇತನ್ ಸೂರ್ಯ, ವಿನೋದ್ ಆಳ್ವಾ, ಸುಷ್ಮ, ಅಕ್ಷತ ಮುಂತಾದವರಿದ್ದಾರೆ.

ಇಲ್ಲಿಯವರೆಗೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಟ ವಿನೋದ್ ಆಳ್ವಾ ಅವರು ತಮ್ಮ ಯಾವುದೇ ಚಿತ್ರಕ್ಕೂ ಸ್ವತಃ ಡಬ್ಬಿಂಗ್ ಮಾಡಿಲ್ಲ. ನಮ್ಮ ಚಿತ್ರದಲ್ಲಿ ಮೊದಲ ಬಾರಿಗೆ ಅವರೆ ಡಬ್ಬಿಂಗ್ ಮಾಡಿದ್ದಾರೆ ಎಂದು ನಿರ್ದೇಶಕ ಮೋಹನ್ ತಿಳಿಸಿದ್ದಾರೆ.

ದಿನೇಶ್ ಕುಮಾರ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಪ್ರಸಾದ್ ಬಾಬು ಅವರ ಛಾಯಾಗ್ರಹಣವಿದೆ. ಶಿವಪ್ರಸಾದ್ ಸಂಕಲನ, ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಹಾಗೂ ಮದನ್ ಹರಿಣಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಜಿಗ್ರಿ ದೋಸ್ತ್` ಚಿತ್ರದ ಚಿತ್ರೀಕರಣ ಪೂರ್ಣ - Chitratara.com
Copyright 2009 chitratara.com Reproduction is forbidden unless authorized. All rights reserved.