`ದೇವಕಿ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 04 Thu, Jul 2019 08:58:44 AM

ಆರ್.ಸಿ.ಜಿ ಸಿನಿಮಾಸ್ ಲಾಂಛನದಲ್ಲಿ ರವೀಶ್.ಆರ್.ಸಿ ಮತ್ತು ಅಕ್ಷಯ್ ಸಿ.ಎಸ್ ಅವರು ನಿರ್ಮಿಸಿರುವ ‘ದೇವಕಿ‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಈ ಹಿಂದೆ ‘ಮಮ್ಮಿ‘ ಚಿತ್ರವನ್ನು ನಿರ್ದೇಶಿಸಿದ್ದ ಲೋಹಿತ್ ಹೆಚ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ನೊಬಿನ್ ಪಾಲ್ ಸಂಗೀತ ನೀಡಿದ್ದಾರೆ. ಹೆಚ್.ಸಿ.ವೇಣು ಛಾಯಾಗ್ರಹಣ, ರವಿಚಂದ್ರನ್ ಸಿ ಸಂಕಲನ. ಶಿವಕುಮಾರ್ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನವಿರುವ ಈ ಚಿತ್ರಕ್ಕೆ ಗುರುಪ್ರಸಾದ್ ಕಶ್ಯಪ್ ಸಂಭಾಷಣೆ ಬರೆದಿದ್ದಾರೆ.

ಪ್ರಿಯಾಂಕ ಉಪೇಂದ್ರ, ಕಿಶೋರ್, ಸಂಜೀವ್ ಜೈಸ್ವಾಲ್, ಸಂದೀಪ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಪುತ್ರಿ ಐಶ್ವರ್ಯ ಉಪೇಂದ್ರ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ದೇವಕಿ` ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.