`ಪ್ರಾರಂಭ` ಚಿತ್ರದ ಚಿತ್ರೀಕರಣ ಮುಕ್ತಾಯ
Posted date: 07 Wed, Aug 2019 10:16:52 AM

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ರವಿಚಂದ್ರನ್ ಅಭಿನಯದ ‘ಪ್ರಾರಂಭ‘ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಬಳ್ಳಾರಿ, ಚಿಕ್ಕಮಗಳೂರು, ಗೋವಾ, ಮೂಡಿಗೆರೆ, ಮೈಸೂರು ಮುಂತಾದ ಕಡೆ ಚಿತ್ರಕ್ಕೆ 50ದಿನಗಳ ಚಿತ್ರೀಕರಣ ನಡೆದಿದೆ.

ಮನು ಕಲ್ಯಾಡಿ ರಚನೆ ಹಾಗೂ ನಿರ್ದೇಶನದ ಈ ಚಿತ್ರವನ್ನು ಜಗದೀಶ್ ಕಲ್ಯಾಡಿ ಅವರು ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಮೂಲಕ ನಿರ್ಮಿಸುತ್ತಿದ್ದಾರೆ.
‘ಪ್ರಾರಂಭ‘ ಒಂದು ಅದ್ಭುತ ಕಥಾಹಂದರವಿರುವ ಚಿತ್ರ ಕಥೆಯಲ್ಲಿ ಈ ಸಮಾಜಕ್ಕೆ ಪ್ರತ್ಯೇಕವಾಗಿ ಯುವಕ-ಯುವತಿಯರಿಗೆ ಒಂದು ಒಳ್ಳೆಯ ಸಂದೇಶ ಸಾರುವ ಸಿನಿಮಾ. ನಾಯಕ ಮನೋರಂಜನ್ ರವಿಚಂದ್ರನ್ ಅವರು ಮೂರು ವಿಭಿನ್ನ ಶೈಲಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕ ಮನು ಕಲ್ಯಾಡಿ ತಿಳಿಸಿದ್ದಾರೆ.   

5 ಹಾಡುಗಳಿರುವ ಈ ಚಿತ್ರಕ್ಕೆ ಪ್ರಜ್ವಲ್ ಪೈ ಅವರ ಸಂಗೀತ ನಿರ್ದೇಶನವಿದೆ. 2 ಸಾಹಸ ಸನ್ನಿವೆಶಗಳಿದ್ದು , ಥ್ರಿಲ್ಲರ್ ಮಂಜು ಹಾಗೂ ವಿಕ್ರಂ ಮೋರ್ ಸಾಹಸ ನಿರ್ದೇಶನ ಮಾಡಿದ್ದಾರೆ. ಸುರೇಶ್‌ಬಾಬು ಛಾಯಾಗ್ರಹಣ, ವಿಜಿ.ಎನ್.ಕುಮಾರ್ ಸಂಕಲನ, ಸಂತು, ಗೀತಾ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ಸಂತೋಷ್ ನಾಯಕ್ ಈ ಚಿತ್ರದ ಹಾಡುಗಳನ್ನು ಬರೆದಿದ್ದಾರೆ.

ಮನೋರಂಜನ್ ರವಿಚಂದ್ರನ್, ಕೀರ್ತಿ ಕಲಕೇರಿ, ಕಡ್ಡಿಪುಡಿ ಚಂದ್ರು, ಹನುಮಂತೇ ಗೌಡ, ಸೂರಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಪ್ರಾರಂಭ` ಚಿತ್ರದ ಚಿತ್ರೀಕರಣ ಮುಕ್ತಾಯ - Chitratara.com
Copyright 2009 chitratara.com Reproduction is forbidden unless authorized. All rights reserved.