`ಫೈರ್ ಫ್ಲೈ`ಗೆ ಸಿಕ್ಕಳು ನಾಯಕಿ....ವಂಶಿಗೆ ಜೋಡಿಯಾದ ರಚನಾ ಇಂದರ್
Posted date: 21 Sun, Jul 2024 11:29:49 AM
ಯುವ ಪ್ರತಿಭೆ ವಂಶಿ ನಟಿಸಿ, ನಿರ್ದೇಶಿಸುತ್ತಿರುವ ಬಹುನಿರೀಕ್ಷಿತ ಸಿನಿಮಾ ಫೈರ್ ಫ್ಲೈ. ಈ ಚಿತ್ರ ನಾನಾ ಕಾರಣಗಳಿಂದ ನಿರೀಕ್ಷೆ ಹೆಚ್ಚಿಸಿದೆ. ಅದರಲ್ಲಿ ಪ್ರಮುಖವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಶಿವರಾಜ್‌ಕುಮಾರ್ ಚಿತ್ರ ನಿರ್ಮಾಣ ಮಾಡುತ್ತಿರುವುದು ಒಂದು ವಿಷಯವಾದರೆ, ಮತ್ತೊಂದು ಕಾರಣ ಸಿನಿಮಾದ ತಾರಾಬಳಗ. ಈಗಾಗಲೇ ಫೈರ್ ಫ್ಲೈ ಸಿನಿತಂಡ ಸುಧಾರಾಣಿ, ಅಚ್ಯುತ್ ಕುಮಾರ್ , ಶೀತಲ್ ಶೆಟ್ಟಿ ಸೇರಿದಂತೆ ಹಲವರನ್ನು ಪರಿಚಯಿಸಿದೆ. ಇದೀಗ ಚಿತ್ರದ ನಾಯಕಿ ಯಾರು ಅನ್ನೋದನ್ನು ಅನಾವರಣ ಮಾಡಿದೆ.

ಲವ್ ಮಾಕ್‌ಟೇಲ್‌, ಹರಿಕಥೆ ಅಲ್ಲ ಗಿರಿಕಥೆ, ತ್ರಿಬಲ್‌ ರೈಡಿಂಗ್ ಸಿನಿಮಾಗಳಲ್ಲಿ ಬಬ್ಲಿ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರಚನಾ ಇಂದರ್ ವಂಶಿಗೆ ಜೋಡಿಯಾಗಿ ಅಭಿನಯಿಸಿದ್ದಾರೆ.‌ ನೇಹಾ ಎಂಬ ಪಾತ್ರದಲ್ಲಿ ರಚನಾ ಬಣ್ಣ ಹಚ್ಚಿದ್ದು, ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ.  ನಿವೇದಿತಾ ಶಿವರಾಜ್ ಕುಮಾರ್ ಅವರು ಅದ್ಭುತ ಕೆಲಸ ಮಾಡುತ್ತಿದ್ದಾರೆ. ಇಡೀ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಸಿನಿಮಾದಲ್ಲಿ ನೇಹಾ ಎಂಬ ಪಾತ್ರ ಮಾಡಿದ್ದೇನೆ. ನೇಹಾ ಬದುಕನ್ನು ತುಂಬಾ ಇಷ್ಟಪಡುತ್ತಾಳೆ. ಎಂಜಾಯ್ ಮಾಡುತ್ತಾಳೆ. ಭವಿಷ್ಯದ ಬಗ್ಗೆ ಯೋಚನೆ ಮಾಡೋದಿಲ್ಲ. ಸಿನಿಮಾವನ್ನು ನಾನು ನೋಡಲು ಕಾತರಳಾಗಿದ್ದಾನೆ. ಚಿತ್ರದ ಒಂದಷ್ಟು ಕ್ಲಿಪ್ ನೋಡಿದಾಗ ಮನರಂಜನೆ ನೀಡುವ ಸಿನಿಮಾ ಎನಿಸಿತು. ವಂಶಿ ತುಂಬಾ ಹಾರ್ಡ್ ವರ್ಕ್ ಮಾಡಿದ್ದಾರೆ. ದೀಪಾವಳಿಗೆ ನಮ್ಮ ಚಿತ್ರ ತೆರೆಗೆ ಬರುತ್ತಿದೆ  ಎಂದಿದ್ದಾರೆ.

ಫೈರ್ ಫ್ಲೈ ಸಿನಿಮಾವನ್ನು ಯುವ ನಟ ವಂಶಿ ಡೈರೆಕ್ಟ್ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಾಯಕರಾಗಿಯೂ ಈ ಮೂಲಕ ವಂಶಿ ಕನ್ನಡಕ್ಕೆ ಪರಿಚಯ ಆಗುತ್ತಿದ್ದಾರೆ. ಚಿತ್ರಕ್ಕೆ ಅಭಿಲಾಷ್ ಕಳತ್ತಿ ಛಾಯಾಗ್ರಹಣ ಮಾಡುತ್ತಿದ್ದಾರೆ. ಚರಣ್ ರಾಜ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ರಘು ನಿಡುವಳ್ಳಿ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

ನಾಯಕ- ನಿರ್ದೇಶಕ ವಂಶಿಗೆ ಇಲ್ಲಿ ಜಯ್ ರಾಮ್ ಸಹ-ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾ ನಿರ್ಮಾಣ ಸಂಸ್ಥೆ ಶ್ರೀ ಮುತ್ತು ಸಿನಿ ಸರ್ವಿಸ್ ಸಂಸ್ಥೆ ಈ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೂಡ ಕೊಡುತ್ತಿದೆ. ಈ ಸಂಸ್ಥೆಯ ಮೊದಲ ಕೂಸು ಫೈರ್ ಫ್ಲೈ ಸಿನಿಮಾ ದೀಪಾವಳಿಗೆ ತೆರೆಗೆ ಬರಲಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed