`ಮನೆ ಮಾರಾಟಕ್ಕಿದೆ`ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ
Posted date: 14 Thu, Nov 2019 09:38:14 AM

ಎಸ್.ವಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ಎಸ್.ವಿ.ಬಾಬು ಅವರು ನಿರ್ಮಾಣ ಮಾಡಿರುವ ‘ಮನೆ ಮಾರಾಟಕ್ಕಿದೆ‘ ಚಿತ್ರ ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

‘ಶಿಶಿರ, ‘ಶ್ರಾವಣಿ ಸುಬ್ರಮಣಿ‘, ‘ಶ್ರೀಕಂಠ‘, ‘ಪಟಾಕಿ‘ ಚಿತ್ರಗಳ ನಿರ್ದೇಶಕರಾದ ಮಂಜು ಸ್ವರಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆದಿದ್ದಾರೆ. ಅಭಿಮಾನ್ ರಾಯ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ಸುರೇಶ್‌ಬಾಬು ಅವರ ಛಾಯಾಗ್ರಹಣವಿದೆ. ವಿಶ್ವ ಸಂಕಲನ, ಕಂಬಿ ರಾಜು, ಕಲೈ ನೃತ್ಯ ನಿರ್ದೇಶನ, ವಿಕ್ರಂ ಮೋರ್ ಸಾಹಸ ನಿರ್ದೇಶನ ಹಾಗೂ ಮೋಹನ್ ಬಿ ಕೆರೆ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಸಾಧುಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ರವಿಶಂಕರ್ ಗೌಡ, ಶ್ರುತಿ ಹರಿಹರನ್, ರಾಜೇಶ್ ನಟರಂಗ, ಕಾರುಣ್ಯರಾಮ್, ಶಿವರಾಂ, ಗಿರಿ, ನೀನಾಸಂ ಅಶ್ವತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.  

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಮನೆ ಮಾರಾಟಕ್ಕಿದೆ`ನಾಳೆಯಿಂದ ರಾಜ್ಯಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.