`ಯಾನ` ಚಿತ್ರ ಸದ್ಯದಲ್ಲೇ ತೆರೆಗೆ
Posted date: 08 Wed, May 2019 10:07:16 AM

 Ac me ಮೂವೀಸ್ ಇಂಟರ್ ನ್ಯಾಷನಲ್ ಲಾಂಛನದಲ್ಲಿ ಜೈಜಗದೀಶ್ ಅವರು ಅರ್ಪಿಸಿ, ಹರೀಶ್ ಶೇರಿಗಾರ್ , ಶರ್ಮಿಳಾ ಶೇರಿಗಾರ್, ವೈಭವಿ, ವೈನಿಧಿ, ವೈಸಿರಿ ಅವರು ನಿರ್ಮಿಸಿರುವ ‘ಯಾನ‘ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಜಯಲಕ್ಷ್ಮೀಸಿಂಗ್ ಅವರು ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ  ವಿಜಯಲಕ್ಷ್ಮೀಸಿಂಗ್ ಹಾಗೂ ಸುಹಾಸ್ ಗಂಗಾಧರ್ ಚಿತ್ರಕಥೆ ಬರೆದಿದ್ದಾರೆ. ಸುನಿ ಹಾಗೂ ಅಭಿಷೇಕ್ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ಜೋಶ್ವಾ ಶ್ರೀಧರ್ ಸಂಗೀತ ನೀಡಿದ್ದಾರೆ. ಕರ್ಮ್ ಚಾವ್ಲಾ ಅವರ ಛಾಯಾಗ್ರಹಣವಿರುವ ಈ ಚಿತ್ರದ ತಾರಾಬಳಗದಲ್ಲಿ ವೈಭವಿ, ವೈನಿಧಿ, ವೈಸಿರಿ, ಚಕ್ರವರ್ತಿ, ಸುಮುಖ, ಅಭಿಷೇಕ್, ಅನಂತನಾಗ್, ಸುಹಾಸಿನಿ ಸಾಧುಕೋಕಿಲ, ರಂಗಾಯಣ ರಘು, ಚಿಕ್ಕಣ್ಣ, ರಾಮಕೃಷ್ಣ, ಸುಂದರರಾಜ್, ಸುಂದರ್, ವೀಣಾಸುಂದರ್, ಎಂ.ಎನ್.ಲಕ್ಷ್ಮೀದೇವಿ ಮುಂತಾದವರಿದ್ದಾರೆ.



Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಯಾನ` ಚಿತ್ರ ಸದ್ಯದಲ್ಲೇ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.