`ಶಂಭೋ ಶಿವ ಶಂಕರ` ಚಿತ್ರದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್.
Posted date: 02 Wed, Dec 2020 01:47:20 PM

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡ
 ನಟ ಶಶಿಕುಮಾರ್.
ಬಹಳ ದಿನಗಳ ನಂತರ 'ಶಂಭೋ ಶಿವ   ಶಂಕರ' ಚಿತ್ರದಲ್ಲಿ ಸುಪ್ರೀಂ ಹೀರೋ
ಶಶಿಕುಮಾರ್ ನಟಿಸಲಿದ್ದಾರೆ.‌
ಖಡಕ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಶಶಿಕುಮಾರ್ ಅವರು ಕಾಣಿಸಿಕೊಳಲಿದ್ದು, ಚಿತ್ರದಲ್ಲಿ ಶಶಿಕುಮಾರ್ ಅವರದು ಮಹತ್ವದ ಪಾತ್ರ ಎನ್ನುತ್ತಾರೆ ನಿರ್ದೇಶಕರು.
ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಡಿಸೆಂಬರ್ 9ರಿಂದ ದ್ವಿತೀಯ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭವಾಗಲಿದೆ. ಶಶಿಕುಮಾರ್ ಸೇರಿದಂತೆ ಚಿತ್ರದಲ್ಲಿ ಅಭಿನಯಿಸುವ ಎಲ್ಲಾ ಕಲಾವಿದರು ದ್ವಿತೀಯ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಲಿದ್ದಾರೆ.

ಅಘನ್ಯ ಪಿಕ್ಚರ್ಸ್ ಲಾಂಛನದಲ್ಲಿ ವರ್ತೂರ್ ಮಂಜು ಅವರು  ನಿರ್ಮಿಸುತ್ತಿರುವ  'ಶಂಭೋ ಶಿವ ಶಂಕರ' ಚಿತ್ರವನ್ನು ಶಂಕರ್ ಕೋನಮಾನಹಳ್ಳಿ  ನಿರ್ದೇಶಿಸುತ್ತಿದ್ದಾರೆ. ಕಿರುತೆರೆಯಲ್ಲಿ ಜನಪ್ರಿಯ ಧಾರಾವಾಹಿಗಳನ್ನು ನಿರ್ದೇಶಿಸಿರುವ  
 ಶಂಕರ್ ಕೋನಮಾನಹಳ್ಳಿ ಅವರಿಗೆ ಬೆಳ್ಳಿತೆರೆಯಲ್ಲಿ ಇದು ಮೊದಲ ಚಿತ್ರ.
ಕಥೆ, ಚಿತ್ರಕಥೆ, ಸಂಭಾಷಣೆ ಕೂಡ ಶಂಕರ್ ಕೋನಮಾನಹಳ್ಳಿ ಅವರದೆ.
ಗೌಸ್ ಫೀರ್ ಹಾಗೂ ಹಿತನ್ ಹಾಸನ್ ಹಾಡುಗಳನ್ನು ಬರೆದಿದ್ದು, ಹಿತನ್ ಹಾಸನ್ ಅವರೆ ಸಂಗೀತ ನೀಡುತ್ತಿದ್ದಾರೆ‌.
ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ವೆಂಕಟೇಶ್ ಯುಡಿವಿ ಸಂಕಲನ ಹಾಗೂ ಅಲ್ಟಿಮೆಟ್ ಶಿವು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
'ಶಂಭೋ ಶಿವ ಶಂಕರ' ಮೂರು ನಾಯಕ  ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್,  ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಸಿಕೊಳುತ್ತಿದ್ದಾರೆ. ಈಗಾಗಲೇ ಕನ್ನಡದ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - `ಶಂಭೋ ಶಿವ ಶಂಕರ` ಚಿತ್ರದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್. - Chitratara.com
Copyright 2009 chitratara.com Reproduction is forbidden unless authorized. All rights reserved.