ಕನ್ನಡ ಚಿತ್ರರಂಗ ಪ್ರತಿಭಾನ್ವಿತ ನಟ ರಿಷಿ ವಿಭಿನ್ನ ಪಾತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸಿಕೊಂಡು ಬರ್ತಿದ್ದಾರೆ. ಇದೀಗ ಅವರು ರಾಮನ ಅವತಾರ ಎಂಬ ಮತ್ತೊಂದು ಹೊಸ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಥೇಟ್ ರಾಮನ ಗೆಟಪ್ ನಲ್ಲಿಯೇ ರಿಷಿ ಕಾಣಿಸಿಕೊಂಡಿದ್ದು, ಅರುಣ್ ಸಾಗರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಶುಭ್ರ ಅಯ್ಯಪ್ಪ ಹಾಗೂ ಪ್ರಣೀತಾ ಸುಭಾಷ್ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.
ನಿರ್ದೇಶಕ ಸಿಂಪಲ್ ಸುನಿ ಕ್ಯಾಂಪನ್ ನಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಬರಹಗಾರನಾಗಿ ಕೆಲಸ ಮಾಡಿರುವ ಅನುಭವವಿರುವ, ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.
ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಗ್ರಾಫಿಕ್ಸ್ ಹಾಗೂ ಮ್ಯೂಸಿಕ್ ಕೆಲಸಗಳು ಭರದಿಂದ ಸಾಗ್ತಿವೆ. ಜೂನ್ ಮೊದಲನೇ ವಾರದಲ್ಲಿ ರಾಮನ ಅವತಾರ ಸಿನಿಮಾವನ್ನು ತೆರೆಗೆ ತರೋದಿಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.