`ಜುಗಲ್ ಬಂದಿ` ಇಂಟ್ರಸ್ಟಿಂಗ್ ಟ್ರೇಲರ್ ರಿಲೀಸ್ - ದಿವಾಕರ ಡಿಂಡಿಮ ನಿರ್ದೇಶನದ ಸಿನಿಮಾ ಶೀಘ್ರದಲ್ಲೇ ತೆರೆಗೆ
Posted date: 21 Tue, Mar 2023 11:18:04 AM
ಹೊಸಬರ ವಿನೂತನ ಪ್ರಯತ್ನವಿರುವ `ಜುಗಲ್ ಬಂದಿ` ಸಿನಿಮಾ ಟ್ರೇಲರ್ ಬಿಡುಗಡೆಯಾಗಿದೆ. ದಿವಾಕರ ಡಿಂಡಿಮ ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡಿದೆ. ಫಸ್ಟ್ ಲುಕ್ ಹಾಗೂ ಹಾಡುಗಳ ಮೂಲಕ ಗಮನ ಸೆಳೆದ ಸಿನಿಮಾ ಸದ್ಯದಲ್ಲೇ ಚಿತ್ರಮಂದಿರದ ಅಂಗಳಕ್ಕೆ ಹೆಜ್ಜೆ ಇಡಲಿದ್ದು, ಅದಕ್ಕೂ ಮುನ್ನ ಟ್ರೇಲರ್ ಮೂಲಕ ಸಿನಿಮಾಗೆ ಆಮಂತ್ರಣ ನೀಡಿದೆ ಚಿತ್ರತಂಡ.

ಡಿಂಡಿಮ ಪ್ರೊಡಕ್ಷನ್ಸ್ ನಡಿ ನಿರ್ಮಾಣವಾದ ಈ ಚಿತ್ರ ಹಲವು ಕಥೆಗಳ ಜುಗಲ್ ಬಂದಿ. ತಾಯಿ ಹೃದಯದ ಮಿಡಿತ, ಪ್ರೀತಿ, ವಂಚನೆ ಒಳಗೊಂಡ ಟ್ರೇಲರ್ ತುಣುಕು ಕೂಡ ಅದರ ಝಲಕ್ ಕಟ್ಟಿಕೊಟ್ಟಿದೆ.  ಚಿತ್ರದಲ್ಲಿ ಕಾಂತಾರ ಖ್ಯಾತಿಯ ಮಾನಸಿ ಸುಧೀರ್, ಅರ್ಚನಾ ಕೊಟ್ಟಿಗೆ, ಅಶ್ವಿನ್ ರಾವ್ ಪಲ್ಲಕ್ಕಿ, ಸಂತೋಷ್ ಆಶ್ರಯ್, ಯಶ್ ಶೆಟ್ಟಿ ಒಳಗೊಂಡ ಮುಖ್ಯ ಭೂಮಿಕೆಯಿದೆ. ಪ್ರಕಾಶ್ ಬೆಳಗಲ್, ಚಂದ್ರಪ್ರಭಾ ಜಿ ಯುವಕ, ರಂಜನ್, ಯುಕ್ತ ಅಲ್ಲು ಸುಶ್, ಅರವಿಂದ್ ರಾವ್ ಒಳಗೊಂಡ ತಾರಾಬಳಗ `ಜುಗಲ್ ಬಂದಿ` ಸಿನಿಮಾದಲ್ಲಿದೆ.

ದಿವಾಕರ ಡಿಂಡಿಮ ನಿರ್ದೇಶನದ ಜೊತೆಗೆ ಡಿಂಡಿಮ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ. ಪ್ರದ್ಯೋತ್ತನ್ ಸಂಗೀತ ನಿರ್ದೇಶನ, ಪ್ರಸಾದ್ ಹೆಚ್ ಎಂ ಸಂಕಲನ ಚಿತ್ರಕ್ಕಿದೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಮೂರೂ ಹಾಡುಗಳಿಗೆ ನಿರ್ದೇಶಕ ದಿವಾಕರ್ ಡಿಂಡಿಮ ಸಾಹಿತ್ಯ ಬರೆದಿದ್ದಾರೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed