ಅಕೋಬರ್ 9 ರಂದು ಕೃಷ್ಣ ಟಾಕೀಸ್ ಚಿತ್ರದ ಟೀಸರ್ ಬಿಡುಗಡೆ
Posted date: 09 Wed, Oct 2019 09:54:44 AM

ಗೋಕುಲ ಎಂಟರ್ ಟೈನರ್ ಲಾಂಛನದಲ್ಲಿ ಗೋವಿಂದರಾಜು ಎ.ಹೆಚ್ ಅವರು ನಿರ್ಮಿಸುತ್ತಿರುವ  ಹಾಗೂ ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ ‘ಕೃಷ್ಣ ಟಾಕೀಸ್‘ ಚಿತ್ರದ ಟೀಸರ್ ಅಕ್ಟೋಬರ್ 9 ರಂದು ಬಿಡುಗಡೆಯಾಗಲಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಮಡಿಕೇರಿಯಲ್ಲಿ ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಿದ್ದಾರೆ. ಚಿತ್ರದ ಬಹುತೇಕ ಕಲಾವಿದರು ಹಾಗೂ ತಂತ್ರಜ಼್ಞರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿ ಯಾಗಲಿದ್ದಾರೆ.

ವಿಜಯಾನಂದ್ ಕಥೆ, ಚಿತ್ರಕಥೆ, ಬರೆದು ನಿರ್ದೇಶಿಸುತ್ತಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಆ ಪಕಿ ಒಂದು ಹಾಡು ರಾಜಾಸ್ಥಾನದಲ್ಲಿ ಚಿತ್ರೀಕರಣಗೊಳ್ಳಲಿದೆ.

20 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ ಹಾಗೂ 40 ಕ್ಕೂ ಹೆಚ್ಚು ಚಿತ್ರಗಳಿಗೆ ಗೀತರಚನೆ ಮಾಡಿರುವ ಆನಂದ ಪ್ರಿಯ ಈ ಚಿತ್ರದ ಮೂಲಕ ತಮ್ಮ ಹೆಸರನ್ನು ವಿಜಯಾನಂದ್ ಎಂದು ಬದಲಾವಣೆ ಮಾಡಿಕೊಂಡಿದ್ದಾರೆ.

ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ವಿಲಿಯಮ್ ಡೇವಿಡ್ ಅವರ ಛಾಯಾಗ್ರಹಣವಿದೆ. ಶ್ರೀಕಾಂತ್ ಸಂಕಲನ, ಮೋಹನ್ ನೃತ್ಯ ನಿರ್ದೇಶನ ಹಾಗೂ ಬಾಬುಖಾನ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ಶೈಲೇಶ್ ಸಂಭಾಷಣೆ ಬರೆದಿದ್ದಾರೆ.

ಅಜಯ್ ರಾವ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿ ಅಪೂರ್ವ, ಚಿಕ್ಕಣ್ಣ, ಸಿಂಧೂಲೋಕನಾಥ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಶೋಭ್‌ರಾಜ್, ಮಂಡ್ಯ ರಮೇಶ್,  ನಿರಂತ್, ಯಶ್ ಶೆಟ್ಟಿ, ಉಮೇಶ್, ಶ್ರೀನಿವಾಸ ಪ್ರಭು, ಲಕ್ಷ್ಮೀಗೌಡ, ಯಮುನ, ಧರ್ಮೇಂದ್ರ ಅರಸ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅಕೋಬರ್ 9 ರಂದು ಕೃಷ್ಣ ಟಾಕೀಸ್ ಚಿತ್ರದ ಟೀಸರ್ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.