ಅಕ್ಟೋಬರ್ 4 ರಂದು `ಅಧ್ಯಕ್ಷ ಇನ್ ಅಮೇರಿಕಾ` ವಿಶ್ವದಾದ್ಯಂತ ಬಿಡುಗಡೆ
Posted date: 31 Sat, Aug 2019 08:52:55 AM

 ಪೀಪಲ್ ಮೀಡಿಯಾ ಫ಼್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಟಿ.ಜಿ ಅವರು ನಿರ್ಮಿಸಿರುವ ‘ಅಧ್ಯಕ್ಷ ಇನ್ ಅಮೇರಿಕಾ‘ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಅಕ್ಟೋಬರ್ 4 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.  ವಿವೇಕ್ ಕುಚಿಬೊಟ್ಲ ಈ ಚಿತ್ರದ ಸಹ ನಿರ್ಮಾಪಕರು.

ಯೋಗಾನಂದ್ ಮುದ್ದಾನ್ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರದ ನಾಯಕರಾಗಿ ಶರಣ್ ಅಭಿನಯಿಸಿದ್ದಾರೆ. ರಾಗಿಣಿ ದ್ವಿವೇದಿ ಈ ಚಿತ್ರದ ನಾಯಕಿ. ದಿಶಾ ಪಾಂಡೆ, ಅಶೋಕ್, ಅವಿನಾಶ್, ಪ್ರಕಾಶ್ ಬೆಳವಾಡಿ, ಶಿವರಾಜ್ ಕೆ.ಆರ್.ಪೇಟೆ, ಚಿತ್ರಾ ಶೆಣೈ, ಪದ್ಮಜಾ ರಾವ್, ತಬಲ ನಾಣಿ, ಮಕರಂದ್ ದೇಶಪಾಂಡೆ, ತಾರಕ್ ಪೊನ್ನಪ್ಪ, ಸಾಧುಕೋಕಿಲ, ರಂಗಾಯಣ ರಘು, ರಾಕ್‌ಲೈನ್ ಸುಧಾಕರ್, ಅಂಥೋನಿ ಕಮಲ್, ಸುಂದರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ವಿ.ಹರಿಕೃಷ್ಣ ಸಂಗೀತ ನೀಡಿರುವ ಈ ಚಿತ್ರಕ್ಕೆ ಸುಧಾಕರ್ ಎಸ್ ರಾಜ್, ಸಿದ್ಧಾರ್ಥ್ ರಾಮಸ್ವಾಮಿ, ಅನೀಶ್ ತರುಣ್ ಕುಮಾರ್ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ ಹಾಗೂ ರವಿ ಸಂತೆಹೈಕ್ಲು, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.


Kannada Cinema's Latest Wallpapers
Kannada Cinema's Latest Videos
Kannada Movie/Cinema News - ಅಕ್ಟೋಬರ್ 4 ರಂದು `ಅಧ್ಯಕ್ಷ ಇನ್ ಅಮೇರಿಕಾ` ವಿಶ್ವದಾದ್ಯಂತ ಬಿಡುಗಡೆ - Chitratara.com
Copyright 2009 chitratara.com Reproduction is forbidden unless authorized. All rights reserved.