ಆರ್ ಚಂದ್ರು ನೇತೃತ್ವದ``ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್``ಸಂಸ್ಥೆಗೆ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ``ಫಾದರ್``ಚಿತ್ರಕ್ಕೆ ಮೈಸೂರಿನಲ್ಲಿ ಬಿರುಸಿನ ಚಿತ್ರೀಕರಣ
Posted date: 01 Mon, Jul 2024 08:42:06 PM
ಆರ್ ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ ಮೂಡಿಬಂದ ಪ್ಯಾನ್ ಇಂಡಿಯಾ ಚಿತ್ರ "ಕಬ್ಜ" ದೇಶಾದ್ಯಂತ ಜನಮನ್ನಣೆ ಪಡೆದಿತ್ತು. ಈಗ ಈ ಚಿತ್ರವನ್ನು ನಿರ್ಮಿಸಿದ್ದ ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆ ಅತೀ ಹೆಚ್ಚು ತೆರಿಗೆ ಪಾವತಿಸಿದ ಕೀರ್ತಿಗೆ ಭಾಜನವಾಗಿದೆ. ದಾಖಲೆ ಮೊತ್ತದ ಹಣವನ್ನು‌ "ಕಬ್ಜ" ಚಿತ್ರದ ಸಲುವಾಗಿ ಆರ್ ಚಂದ್ರು ಕೇಂದ್ರ ತೆರಿಗೆ ಇಲಾಖೆಗೆ ಪಾವತಿಸಿದ್ದಾರೆ‌. ಯಾವುದೇ ತೆರಿಗೆ ಉಳಿಸಿಕೊಳ್ಳದೇ ಅಧಿಕ ಮೊತ್ತದ ತೆರಿಗೆಯನ್ನು ಪಾವತಿಸಿರುವುದಕ್ಕಾಗಿ ಕೇಂದ್ರ ಹಣಕಾಸು ಸಚಿವಾಲಯದಿಂದ ಪ್ರಶಂಸಾ ಪತ್ರ ಕೂಡ ದೊರಕಿದೆ.  ಸರ್ಕಾರಕ್ಕೆ ದೊಡ್ಡ ಮೊತ್ತದ ತೆರಿಗೆ ಪಾವತಿಸಿದ ಸಾಲಿಗೆ ಕನ್ನಡದ "ಕಬ್ಜ" ಚಿತ್ರ ಸೇರಿದೆ. 

ಇತ್ತೀಚೆಗೆ ನಡೆದ ಪ್ರಜಾವಾಣಿ ಕನ್ನಡ ‌ಸಿನಿ ಸಮ್ಮಾನ ಸಮಾರಂಭದಲ್ಲಿ ‌ಅತ್ಯುತ್ತಮ ವಿಎಫ್ಎಕ್ಸ್ ಪೋಸ್ಟ್ ಪ್ರೊಡಕ್ಷನ್ ಹಾಗೂ ಅನ್ನಿಮೇಷನ್ ಚಿತ್ರ ಪ್ರಶಸ್ತಿಗೆ "ಕಬ್ಜ" ಚಿತ್ರ ಭಾಜನವಾಗಿದೆ.

ಈ ಎಲ್ಲಾ ಖುಷಿಯ ವಿಚಾರಗಳ ನಡುವೆ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಐದು ಚಿತ್ರಗಳಲ್ಲಿ ಒಂದಾದ ಡಾರ್ಲಿಂಗ್ ಕೃಷ್ಣ, ಪ್ರಕಾಶ್ ರೈ ಮುಂತಾದವರು ನಟಿಸುತ್ತಿರುವ "ಫಾದರ್" ಚಿತ್ರಕ್ಕೆ ಮೈಸೂರಿನಲ್ಲಿ‌ ಮೊದಲ ಹಂತದ ಚಿತ್ರೀಕರಣ ಅದ್ದೂರಿಯಾಗಿ  ನಡೆಯುತ್ತಿದೆ.
Kannada Cinema's Latest Wallpapers
Kannada Cinema's Latest Videos
Error, Select (_footer_contact_) query failed