ಇದೇ ತಿಂಗಳಲ್ಲಿ ಲೋಫ಼ರ‍್ಸ್ ತೆರೆಗೆ
Posted date: 02 Wed, Jan 2019 04:07:03 PM

ಎ.ಎನ್.ಎಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಬಿ.ಎನ್.ಗಂಗಾಧರ್ ಅವರು ನಿರ್ಮಿಸಿರುವ ‘ಲೋಫ಼ರ‍್ಸ್‘ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಇದೇ ತಿಂಗಳಲ್ಲಿ ತೆರೆಗೆ ಬರಲಿದೆ.

ಎಸ್.ಮೋಹನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ದಿನೇಶ್ ಕುಮಾರ್ ಅವರ ಸಂಗೀತ ನಿರ್ದೇಶನವಿದೆ. ಪ್ರಸಾದ್ ಬಾಬು ಛಾಯಾಗ್ರಹಣ, ಶಿವು ಸಂಕಲನ ಹಾಗೂ ಕೌರವ ವೆಂಕಟೇಶ್ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚೇತನ್, ಅರ್ಜುನ್ ಆರ್ಯ, ಮನೋಜ್, ಕೆಂಪೇಗೌಡ, ಶ್ರಾವ್ಯ, ಸುಷ್ಮ, ಸಾಕ್ಷಿ, ಎಂ.ಎಸ್.ಉಮೇಶ್, ಟೆನ್ನಿಸ್ ಕೃಷ್ಣ, ಭಾರತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಇದೇ ತಿಂಗಳಲ್ಲಿ ಲೋಫ಼ರ‍್ಸ್ ತೆರೆಗೆ - Chitratara.com
Copyright 2009 chitratara.com Reproduction is forbidden unless authorized. All rights reserved.