ಈ ವಾರ ತೆರೆಗೆ `ಕಪಟನಾಟಕ ಪಾತ್ರಧಾರಿ`
Posted date: 06 Wed, Nov 2019 09:51:03 AM

ಗರುಡ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಕಪಟನಾಟಕ ಪಾತ್ರಧಾರಿ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಕ್ರಿಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ  ಆದಿಲ್ ನದಾಫ಼್ ಸಂಗೀತ ನೀಡಿದ್ದಾರೆ.  ಕ್ರಿಶ್, ವೇಣು ಹಸ್ರಾಳಿ, ಚಾಣಕ್ಯ, ಅನಿರುದ್ಧ್ ಶಾಸ್ತ್ರಿ ಹಾಡುಗಳನ್ನು ರಚಿಸಿದ್ದಾರೆ. ಹರಿಚರಣ್, ಸಿದ್ಧಾರ್ಥ್, ಮಾಧುರಿ ಶೇಷಾದ್ರಿ, ಇಶಾ ಸುಚಿ, ಪವನ್ ಪಾರ್ಥ ಹಾಗೂ ಅನಿರುದ್ದ್ ಶಾಸ್ತ್ರಿ ಈ ಚಿತ್ರದ ಹಾಡುಗಳನ್ನು ಹಾಡಿದ್ದಾರೆ. ಕಿರಣ್ ಚಂದ್ರ ಹಾಗೂ ವೇಣು ಹಸ್ರಾಳಿ ಸಂಭಾಷಣೆ ಬರೆದಿದ್ದಾರೆ. ಪರಮೇಶ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಶ್ರೀಕಾಂತ್ ಅವರ ಸಂಕಲನವಿದೆ.   

ಸಂಗೀತ ಭಟ್, ಬಾಲು ನಾಗೇಂದ್ರ, ಕರಿ ಸುಬ್ಬು, ಶಂಕರ್ ನಾರಾಯಣ್, ಪ್ರಕಾಶ್ ತುಮ್ಮಿನಾಡು, ಉಗ್ರಂ ಮಂಜು, ಜಯದೇವ್, ನವೀನ್ ವಾಸುದೇವ್, ಸುನೀಲ್ ಕುಲಕರ್ಣಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Kannada Cinema's Latest Wallpapers
Kannada Cinema's Latest Videos
Kannada Movie/Cinema News - ಈ ವಾರ ತೆರೆಗೆ `ಕಪಟನಾಟಕ ಪಾತ್ರಧಾರಿ` - Chitratara.com
Copyright 2009 chitratara.com Reproduction is forbidden unless authorized. All rights reserved.